ಗದಗ: ಜಿಲ್ಲೆಯಲ್ಲಿ ಇಂದು ಮತ್ತೆ 3 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.
ಕೊರೊನಾ ಭೀತಿ: ಗದಗದಲ್ಲಿ ಮೂವರ ಮೇಲೆ ತೀವ್ರ ನಿಗಾ - ಮೂವರ ಮೇಲೆ ತೀವ್ರ ನಿಗಾ
ರಾಜ್ಯದಲ್ಲಿ ಕೊರೊನಾ ಶಂಕಿತರ ಸಂಖ್ಯೆ ಏರುತ್ತಲೇ ಇದೆ. ಈ ನಡುವೆ ಗದಗದಲ್ಲಿ ಮತ್ತೆ ಮೂವರ ಮೇಲೆ ತೀವ್ರ ನಿಗಾ ಇಡಲಾಗಿದೆ ಅಂತಾ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದ್ದಾರೆ. 64 ಜನರ ರಕ್ತ ತಪಾಸಣೆಗಾಗಿ ಸ್ಯಾಂಪಲ್ ಕಳುಹಿಸಲಾಗಿತ್ತು. ಇದರಲ್ಲಿ 56 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 8 ಜನರ ವರದಿ ಬಾಕಿ ಇದೆ ಎಂದಿದ್ದಾರೆ.
ಕೊರೊನಾ: ಗದಗದಲ್ಲಿ ವೈರಸ್ ಭೀತಿ ಮೂವರ ಮೇಲೆ ತೀವ್ರ ನಿಗಾ
ಇದುವರೆಗೆ ಗದಗ ಜಿಲ್ಲೆಯಲ್ಲಿ 208 ಜನರ ಮೇಲೆ ನಿಗಾ ವಹಿಸಲಾಗಿದೆ. ಇದರಲ್ಲಿ 28 ದಿನಗಳ ನಿಗಾ ಅವಧಿ ಪೂರೈಸಿದವರು 15 ಜನ ಇದ್ರೆ, ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರು 181 ಜನ ಇದ್ದಾರೆ.
12 ಜನ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 64 ಜನರ ರಕ್ತ ತಪಾಸಣೆಗಾಗಿ ಸ್ಯಾಂಪಲ್ ಕಳುಹಿಸಲಾಗಿತ್ತು. ಇದರಲ್ಲಿ 56 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 8 ಜನರ ವರದಿ ಬಾಕಿ ಇದೆ ಎಂದು ತಿಳಿಸಿದ್ದಾರೆ.