ಗದಗ: ಅಡುಗೆ ಸಿಲಿಂಡರ್ಗೆ ಬೆಂಕಿ ತಗುಲಿದ ಪರಿಣಾಮ ಜನರಲ್ಲಿ ಕೆಲಕಾಲ ಆತಂಕದ ವಾತಾವರಣ ಮೂಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.
ಗ್ಯಾಸ್ ಸಿಲಿಂಡರ್ಗೆ ಬೆಂಕಿ: ತಪ್ಪಿದ ಭಾರಿ ಅನಾಹುತ
ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಮನೆಯೊಂದರಲ್ಲಿ ಸಿಲಿಂಡರ್ಗೆ ಬೆಂಕಿ ಹೊತ್ತಿಕೊಂಡಿದ್ದು, ಸುತ್ತಲಿನ ಸಾಮಾನುಗಳಿಗೆ ಬೆಂಕಿ ತಗುಲಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ಮನೆ ಮಾಡಿತ್ತು.
ಗ್ಯಾಸ್ ಸಿಲಿಂಡರ್ಗೆ ಬೆಂಕಿ
ಇಲ್ಲಿನ 22ನೇ ವಾರ್ಡ್ನ ರಫೀಕ್ ಬಾಗೇವಾಡಿ ಎಂಬುವವರ ಮನೆಯಲ್ಲಿನ ಸಿಲಿಂಡರ್ಗೆ ಬೆಂಕಿ ತಗುಲಿದ ಪರಿಣಾಮ ಅಡುಗೆ ಮನೆಯಲ್ಲಿದ್ದ ಇತರೆ ಸಾಮಾನುಗಳಿಗೂ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ವ್ಯಕ್ತಿಯ ಕಣ್ಣಿಗೆ ಗಾಯವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.