ಕರ್ನಾಟಕ

karnataka

ETV Bharat / state

ಮಲಪ್ರಭಾ ನದಿಯ ಪ್ರವಾಹಕ್ಕೆ ಕೊಚ್ಚಿ ಹೋಯ್ತು ರಾಷ್ಟ್ರೀಯ ಹೆದ್ದಾರಿ! - Damage to National Highway 218

ಕಳೆದ ಬಾರಿ ಪ್ರವಾಹ ಬಂದಾಗ ರಸ್ತೆ ಹಾಳಾಗಿತ್ತು. ಈ ವೇಳೆ ಶಾಶ್ವತ ಮೇಲ್ಸೇತುವೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದರು. ಆಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಸರ್ಕಾರಕ್ಕೆ ಎರಡೂವರೆ ಕೋಟಿ ರೂಪಾಯಿಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸರ್ಕಾರ ಕೇವಲ 98 ಲಕ್ಷ ರೂಪಾಯಿ ಬಿಡುಗಡೆ ಮಾಡಿತ್ತು. ಆಗ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದ ಹೆದ್ದಾರಿ ಈಗ ಮಲಪ್ರಭ ನದಿ ಪ್ರವಾಹಕ್ಕೆ ಕೊಚ್ಚಿಹೋಗಿದೆ.

Damage to National Highway due toFlood
ಮಲಪ್ರಭಾ ನದಿಯ ಪ್ರವಾಹಕ್ಕೆ ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ

By

Published : Aug 20, 2020, 3:37 PM IST

Updated : Aug 20, 2020, 4:34 PM IST

ಗದಗ: ಮಲಪ್ರಭಾ ನದಿಯ ಪ್ರವಾಹಕ್ಕೆಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಬಳಿಯ ರಾಷ್ಟ್ರೀಯ ಹೆದ್ದಾರಿ 218 ಕ್ಕೆ ಹಾನಿಯಾಗಿದ್ದು, ಸಂಚಾರ ಬಂದ್​ ಆಗಿದೆ.

ಹುಬ್ಬಳ್ಳಿ-ವಿಜಯಪುರ ಮೂಲಕ ಸೊಲ್ಲಾಪುರಕ್ಕೆ ಸಂಪರ್ಕ ಕಲ್ಪಿಸುವ ಈ ಹೆದ್ದಾರಿಯಲ್ಲಿ ಕೊಣ್ಣೂರು ಬಳಿ ಸುಮಾರು 400 ಮೀಟರ್ ರಸ್ತೆ ಹಾಳಾಗಿದೆ. ಕಳೆದ ವರ್ಷ ಪ್ರವಾಹಕ್ಕೆ ಈ ರಸ್ತೆ ಕೊಚ್ಚಿ ಹೋಗಿತ್ತು. ಈ ಬಾರಿಯೂ ಅದೇ ರೀತಿ ಆಗಿದೆ.

ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ

ಇದನ್ನೂ ಓದಿ : ಮಲಪ್ರಭಾ ನದಿ ಅಬ್ಬರ: ನೂರಾರು ಕುಟುಂಬಗಳು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

ಪ್ರವಾಹ ಬಂದಾಗಲೆಲ್ಲಾ ರಸ್ತೆಯ ಪರಿಸ್ಥಿತಿ ಇದೇ ರೀತಿ ಆಗುತ್ತಿದೆ. ಕಳೆದ ಬಾರಿ ಪ್ರವಾಹ ಬಂದಾಗ ರಸ್ತೆ ಹಾಳಾಗಿತ್ತು. ಈ ವೇಳೆ ಶಾಶ್ವತ ಮೇಲ್ಸೇತುವೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದರು. ಆಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಸರ್ಕಾರಕ್ಕೆ ಎರಡೂವರೆ ಕೋಟಿ ರೂಪಾಯಿಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸರ್ಕಾರ ಕೇವಲ 98 ಲಕ್ಷ ರೂಪಾಯಿ ಬಿಡುಗಡೆ ಮಾಡಿತ್ತು. ಇದರಿಂದ ತಾತ್ಕಾಲಿಕವಾಗಿ ರಸ್ತೆ ದುರಸ್ತಿ ಮಾಡಲಾಗಿತ್ತು. ಈ ವರ್ಷ ಮತ್ತೆ ಪ್ರವಾಹ ಬಂದು ರಸ್ತೆ ಕೊಚ್ಚಿ ಹೋಗಿದೆ. ಕಳೆದ ವರ್ಷ ವ್ಯಯಿಸಿದ ಲಕ್ಷಾಂತರ ಈಗ ನೀರಿನಲ್ಲಿ ಕೊಚ್ಚಿ ಹೋದಂತಾಗಿದೆ.

Last Updated : Aug 20, 2020, 4:34 PM IST

For All Latest Updates

ABOUT THE AUTHOR

...view details