ಗದಗ:ಮಾರ್ಚ್ 15 ಹಾಗೂ 16ರಂದು ಐತಿಹಾಸಿಕ ಲಕ್ಕುಂಡಿ ಉತ್ಸವವನ್ನುಅದ್ಧೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಮಾರ್ಚ್ 15, 16ರಂದು ಐತಿಹಾಸಿಕ ಲಕ್ಕುಂಡಿ ಉತ್ಸವ - historic Lakkundi festival
ಮಾರ್ಚ್ 15 ಹಾಗೂ 16ರಂದು ಗದಗದ ಐತಿಹಾಸಿಕ ಲಕ್ಕುಂಡಿ ಉತ್ಸವವನ್ನು ಅದ್ಧೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಮಾರ್ಚ್ 15 ಹಾಗೂ 16 ರಂದು ಐತಿಹಾಸಿಕ ಲಕ್ಕುಂಡಿ ಉತ್ಸವ ಮಾಡಲು ನಿರ್ಧಾರ...
ಗದಗದ ಜಿಲ್ಲಾಡಳಿತ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿದ ಅವರು, ಫೆಬ್ರುವರಿ 15ರಂದು ಲಕ್ಕುಂಡಿ ಗ್ರಾಮಕ್ಕೆ ಹೋಗಿ ಪೂರ್ವಭಾವಿ ಸಭೆಯನ್ನು ನಡೆಸಲಾಗುವುದು. ಈ ಹಿಂದೆ ಹೆಚ್.ಕೆ.ಪಾಟೀಲ್ ಅವರು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಿದ್ದರು. ಆದರೆ, ಈವರೆಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದಿಂದ ಒಂದೇ ಒಂದು ಸಭೆ ಆಗಿಲ್ಲ. ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡುತ್ತೇನೆ. ಎರಡು ದಿನಗಳ ಕಾಲ ಅದ್ಧೂರಿಯಾಗಿ ಲಕ್ಕುಂಡಿ ಉತ್ಸವವನ್ನು ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.