ಗದಗ: ಖಾತೆ ಬದಲಾವಣೆಗಾಗಿ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ.
ಎಸಿಬಿ ಬಲೆಗೆ ಬಿದ್ದ ಕಂಪ್ಯೂಟರ್ ಆಪರೇಟರ್ - ಗದಗ
ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ ಎಸಿಬಿ ಬಲೆಗೆ ಬಿದ್ದ ಕಂಪ್ಯೂಟರ್ ಆಪರೇಟರ್.
ಲಂಚದ ಬೇಡಿಕೆ: ಎಸಿಬಿ ಬಲೆಗೆ ಬಿದ್ದ ಕಂಪ್ಯೂಟರ್ ಆಪರೇಟರ್
ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ ಎಸಿಬಿ ಬಲೆಗೆ ಬಿದ್ದ ಕಂಪ್ಯೂಟರ್ ಆಪರೇಟರ್. ಮಹೇಶ್ ಎಂಬುವರ ಬಳಿ 3,500 ರೂ. ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗ್ತಿದೆ. ಖಾತೆ ಬದಲಾವಣೆ ಹಾಗೂ ಕಂಪ್ಯೂಟರ್ ಉತಾರಕ್ಕೆ ಲಂಚದ ಬೇಡಿಕೆ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ ಅವರ ದೂರಿನ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಡಿಎಸ್ಪಿ ಎನ್.ವಾಸುದೇವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.