ಗದಗ:ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಜಿಲ್ಲೆಯ ನಾಲ್ಕು ಜನರನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ದೆಹಲಿ ಧರ್ಮಸಭೆಯಲ್ಲಿ ಭಾಗಿಯಾಗಿದ್ದ ನಾಲ್ವರ ಪತ್ತೆ: ಗದಗ ಜಿಲ್ಲಾಧಿಕಾರಿ
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಜಿಲ್ಲೆಯ ನಾಲ್ಕು ಜನರನ್ನು ಗದಗ ಜಿಲ್ಲಾಡಳಿತ ಪತ್ತೆ ಮಾಡಿದೆ.
ಎಂ.ಜಿ. ಹಿರೇಮಠ
ಜಿಲ್ಲೆಯ 13 ಜನರ ಪೈಕಿ ಇಂದು ನಾಲ್ವರನ್ನು ಬಗ್ಗೆ ಮಾಹಿತಿ ಕಲೆಹಾಕಿದ್ದು, ಇವರಲ್ಲಿ ಈಗಾಗಲೇ 9 ಜನರ ರಕ್ತದ ಮಾದರಿ ಹಾಗೂ ಗಂಟಲಿನ ದ್ರವವನ್ನು ತಪಾಸಣೆಗೆ ಕಳುಹಿಸಲಾಗಿದೆ.
9 ಜನರ ವರದಿ ನೆಗೆಟಿವ್ ಬಂದಿದ್ದು ಉಳಿದವರ ವರದಿಗಾಗಿ ವೈದ್ಯರು ಕಾಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ಒದಗಿಸಿದರು.