ಕರ್ನಾಟಕ

karnataka

ETV Bharat / state

ಪ್ರವಾಹ ಪರಿಹಾರದ ಚೆಕ್ ವಿತರಣೆಯಲ್ಲಿ ತಾರತಮ್ಯ ಆರೋಪ: ಪಂಚಾಯತ್​ಗೆ ಬೀಗ ಜಡಿದ ಸಂತ್ರಸ್ತರು - ನರಗುಂದ

ಗದಗ ಜಿಲ್ಲೆಯಲ್ಲಿ ನೆರೆ ಪೀಡಿತ ಸಂತ್ರಸ್ತರಿಗೆ ಪ್ರವಾಹ ಪರಿಹಾರದ ಚೆಕ್ ವಿತರಣೆಯಲ್ಲಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿ ಜನರು ಪ್ರತಿಭಟನೆ ನಡೆಸಿದರು.

ಪಂಚಾಯತ್​ಗೆ ಬೀಗ ಜಡಿದು ಪ್ರತಿಭಟನೆ

By

Published : Aug 19, 2019, 5:05 PM IST

ಗದಗ:ಜಿಲ್ಲೆಯಲ್ಲಿ ನೆರೆ ಪೀಡಿತ ಸಂತ್ರಸ್ತರಿಗೆ ಪ್ರವಾಹ ಪರಿಹಾರದ ಚೆಕ್ ವಿತರಣೆಯಲ್ಲಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಅಂತಾ ಆರೋಪಿಸಿ ಪ್ರತಿಭಟನೆ ನಡೆಸಿದರು.

ನರಗುಂದ ತಾಲೂಕಿನ ವಾಸನ ಗ್ರಾಮ ಪಂಚಾಯತ್​ ಕಚೇರಿಗೆ ಬೀಗ ಜಡಿಯುವ ಮೂಲಕ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತ್ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಸಂತ್ರಸ್ತರಿಗೆ ನಿಯಮಿತವಾಗಿ ವಿತರಿಸಬೇಕಾದ ಚೆಕ್ ವಿತರಿಸುವಲ್ಲಿ ಗೊಂದಲ ಉಂಟಾಗಿದೆ ಎಂದು ಸಂತ್ರಸ್ತರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಪಂಚಾಯತ್​ಗೆ ಬೀಗ ಜಡಿದು ಪ್ರತಿಭಟನೆ

ಅಲ್ಲದೆ, ಸಂತ್ರಸ್ತರು ಗ್ರಾಮ ಲೆಕ್ಕಾಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಎಸಿ ಮತ್ತು ತಹಶಿಲ್ದಾರರು ಗ್ರಾಮಕ್ಕೆ ಆಗಮಿಸಿ ಈ ತಾರತಮ್ಯವನ್ನು ಸರಿಪಡಿಸಬೇಕೆಂದು ಸಂತ್ರಸ್ತರು ಆಗ್ರಹಿಸಿದ್ದಾರೆ.

ABOUT THE AUTHOR

...view details