ಗದಗ:ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಡಿ.ಕೆ. ಶಿವಕುಮಾರ್ ಹಿಂದಿನಿಂದಲೂ ಹೇಳುತ್ತಾ ಬಂದಿದ್ದಾರೆ. ಆದರೆ, ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಯಾರೂ ವಿರೋಧ ಮಾಡಿಲ್ಲ. ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಮೀಡಿಯಾ ಮುಂದೆ ಬಂದು ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಇದೆಲ್ಲ ಕಟ್ಟುಕಥೆ ಎಂದು ಗದಗದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ನಾನು 25 ವರ್ಷದಿಂದ ಪರಿಚಯ ಇದ್ದೇನೆ. ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಅಂತ ಅವತ್ತಿನಿಂದಲೂ ಅದನ್ನೇ ಹೇಳ್ತಿದ್ದಾರೆ. ವ್ಯಕ್ತಿ ಪೂಜೆ ಬಿಡಿ, ಪಕ್ಷ ಪೂಜೆ ಮಾಡಿ ಅಂತ ಹಿಂದಿನಿಂದಲೂ ಹೇಳಿದ್ದಾರೆ. ಆದರೆ, ಆ ಮಾತಿಗೂ ಸಿದ್ದರಾಮಯ್ಯ ಹುಟ್ಟು ಹಬ್ಬಕ್ಕೆ ಯಾವುದೇ ಕನೆಕ್ಷನ್ ಇಲ್ಲ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.