ಗದಗ: ಕೊರೊನಾ ವೈರಸ್ ಭೀತಿ ರಾಜ್ಯಾದ್ಯಂತ ಸಂಚಲನ ಸೃಷ್ಠಿಸಿದ್ದು, ಜಿಲ್ಲೆಯಲ್ಲಿ ವೈರಸ್ ಇಲ್ಲ, ಸುಳ್ಳು ವದಂತಿ ನಂಬಬೇಡಿ ಎಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟನೆ ನೀಡಿದ್ದಾರೆ.
ಗದಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿಲ್ಲ, ಸುಳ್ಳು ವದಂತಿ ನಂಬಬೇಡಿ: ಜಿಲ್ಲಾಧಿಕಾರಿ - ಕೊರೊನಾ ವೈರಸ್ ಗದಗ ಹಾಗೂ ಲಕ್ಷ್ಮೇಶ್ವರ ಭಾಗದಲ್ಲಿ ಹರಡಿದೆ
ಜಿಲ್ಲೆಯಲ್ಲಿ ವೈರಸ್ ಇಲ್ಲ, ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿಲ್ಲಾ, ಸುಳ್ಳು ವದಂತಿ ನಂಬಬೇಡಿ: ಡಿಸಿ ಸ್ಪಷ್ಟನೆ
ಈಗಾಗಲೇ ಜಿಲ್ಲಾಡಳಿತ ಕೊರೊನಾ ವೈರಸ್ ಕುರಿತು ಸಕಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುತ್ತಿದೆ. ಕೊರೊನಾ ವೈರಸ್ ಗದಗ ಹಾಗೂ ಲಕ್ಷ್ಮೇಶ್ವರ ಭಾಗದಲ್ಲಿ ಹರಡಿದೆ ಎಂಬ ಸುಳ್ಳು ವದಂತಿ ಹರಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ ಶಂಕಿತ ಪ್ರಕರಣಗಳು ವರದಿಯಾಗಿಲ್ಲ. ಹೀಗೆಲ್ಲ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.