ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ, ವಿರೂಪಾಪುರ ತಾಂಡಾ ಸುತ್ತ ಮುತ್ತ ರಾತ್ರಿ ಲಘು ಭೂಕಂಪ ಸಂಭವಿಸಿದೆ. ಇದರಿಂದ ಜನ ಕೆಲಕಾಲ ಭಯದಿಂದಾಗಿ ಮನೆ ಬಿಟ್ಟು ಹೊರಗೆ ಬಂದಿದ್ದಾರೆ.
ರಾತ್ರಿ 8-24ರ ಸುಮಾರಿಗೆ 2-3 ಸೆಕೆಂಡ್‌ಗಳಷ್ಟು ಕಾಲ ಭೂಮಿ ಕಂಪಿಸಿದ ಅನುಭವ ತಾಂಡಾದ ಜನರಿಗೆ ಉಂಟಾಗಿದ್ದು, ಮನೆಯ ಗೃಹಪಯೋಗಿ ವಸ್ತುಗಳು ಅಲುಗಾಡಿವೆ. ಘಟನೆಯಿಂದ ಗಾಬರಿಗೊಂಡ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ.