ಗದಗ:ಎಸಿಬಿ ದಾಳಿಗೊಳಗಾಗಿ ವಿಚಾರಣೆಗೊಳಪಟ್ಟಿದ್ದ ಗದಗ - ಬೆಟಗೇರಿ ನಗರಸಭೆಯ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಕುಮಾರ್ ಮುದ್ದಾ ಅವರನ್ನು ಎಸಿಬಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಘನತ್ಯಾಜ್ಯ ವಿಲೇವಾರಿ ಘಟಕದಿಂದ ಹೊಸ ಘಟಕಕ್ಕೆ ಮಣ್ಣು ಸಾಗಣೆ ಮಾಡಿದ ಬಿಲ್ ಪಾಸ್ ಮಾಡಲು ನಗರಸಭೆ ಎಇಇ ವರ್ಧಮಾನ್ ಎಸ್.ಹುದ್ದಾರ್, ಆಯುಕ್ತ ರಮೇಶ್ ಪಾಂಡುರಂಗ ಜಾಧವ್ ಹಾಗೂ ನಗರಾಭಿವೃದ್ಧಿ ಕೋಶದ ಕಾರ್ಯ ಪಾಲಕ ಇಂಜಿನಿಯರ್ ಅನಿಲ್ ಕುಮಾರ್ ಮುದ್ದಾ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಅನಿಲ್ ಕುಮಾರ್ ಮುದ್ದಾ ಜುಲೈ 5ರಂದು 5,000 ರೂ. ಹಣ ಪಡೆದಿದ್ದರು. ನಗರಸಭೆ ಆಯುಕ್ತ ರಮೇಶ್ ಜಾಧವ್ ಕೂಡ 1.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಜೊತೆಗೆ ನಗರಸಭೆಯ ಎಇಇ ವರ್ಧಮಾನ್ ಹುದ್ದಾರ್ 40 ಸಾವಿರ ಹಣ ಕೇಳಿದ್ದರಂತೆ. ಇದರಿಂದ ನೊಂದ ಗುತ್ತಿಗೆದಾರ ಅಬ್ದುಲ್ ಸಲಾಮ್ ಮನಿಯಾರ್ ಎಸಿಬಿಗೆ ದೂರು ನೀಡಿದ್ದರು.