ಕರ್ನಾಟಕ

karnataka

ETV Bharat / state

ಸಾಲಬಾಧೆ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ - ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

ರಾಜ್ಯದಲ್ಲಿ ರೈತರ ಆತ್ಮಹತ್ಯಾ ಸರಣಿ ಮುಂದುವರೆದಿದ್ದು, ಗದಗದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರೈತ ಆತ್ಮಹತ್ಯೆ

By

Published : Aug 29, 2019, 1:19 PM IST

ಗದಗ: ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ.

ಈರನಗೌಡ (40) ಮೃತ ರೈತ, ಗ್ರಾಮ ಶಕ್ತಿ ಸಂಘದಲ್ಲಿ 5 ಲಕ್ಷ , KVG ಬ್ಯಾಂಕ್​ನಲ್ಲಿ 1 ಲಕ್ಷ ಸೇರಿ ಸಾಕಷ್ಟು ಕೈಸಾಲ ಮಾಡಿಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈತ ಕ್ರಿಮಿನಾಶಕ ಸೇವಿಸಿದ್ದ.

ಈಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ರೈತ ಮೃತಪಟ್ಟಿದ್ದಾನೆ. ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details