ಗದಗ:ಕಡಲೆ ಬೆಳೆಗೆ ನ್ಯಾಯಯುತವಾಗಿ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ರೈತ ಹಿತಾಭಿವೃದ್ದಿ ಸಂಘ ಒಕ್ಕಲಗೇರಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಡಲೆ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - Farmers protest in gadag
ಕಡಲೆ ಬೆಳೆಗೆ ನ್ಯಾಯಯುತವಾಗಿ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ರೈತ ಹಿತಾಭಿವೃದ್ದಿ ಸಂಘ ಒಕ್ಕಲಗೇರಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಡಲೆ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಗದಗ ಜಿಲ್ಲೆಯಲ್ಲಿ ಈ ವರ್ಷ ಅತಿವೃಷ್ಟಿ, ಅನಾವೃಷ್ಠಿ ಸಂಭವಿಸಿದೆ. ಹೀಗಾಗಿ ಕಡಲೆ ಬೆಳೆಯ ಇಳುವರಿಯಲ್ಲಿ ಕುಂಠಿತವಾಗಿದೆ. ಕಡಲೆ ಬೆಳೆಗೆ ಯೋಗ್ಯ ಬೆಲೆ ನೀಡಬೇಕು ಮತ್ತು ರೈತ ಬೆಳೆದಂತಹ ಇತರೆ ಬೆಳೆಗಳಿಗೆ ಯೋಗ್ಯವಾದ ಬೆಲೆ ಇಲ್ಲದ ಹಿನ್ನೆಲೆ ಕೂಡಲೇ ಬೆಂಬಲ ಬೆಲೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಅನಂತರ ಈ ಕುರಿತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ರು.