ಗದಗ: ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣಿಗೆ ಶರಣಾಗಿರೋ ಘಟನೆ ಗದಗ ಜಿಲ್ಲೆಯ ಬಳಗಾನೂರು ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ: ಮನನೊಂದ ರೈತ ನೇಣಿಗೆ ಶರಣು - ಗದಗ ಜಿಲ್ಲೆ ರೈತ ಸಾಲಬಾಧೆಯಿಂದ ಆತ್ಮಹತ್ಯೆ
ಗದಗ ಜಿಲ್ಲೆ ಬಳಗಾನೂರು ಗ್ರಾಮದ ರೈತ ವಿರೂಪಾಕ್ಷಪ್ಪ ಗಾಣಿಗೇರ (70) ಎಂಬುವವರು ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡದ್ದಾರೆ. ಕೆವಿಜಿ ಬ್ಯಾಂಕ್ನಲ್ಲಿ ₹2.80 ಹಾಗೂ ಖಾಸಗಿಯಾಗಿ ₹5 ಲಕ್ಷ ರೂ. ಸಾಲ ಮಾಡಿದ್ದರು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿತ್ತು.
ಮೃತ ರೈತ ವಿರೂಪಾಕ್ಷಪ್ಪ ಗಾಣಿಗೇರ
ವಿರೂಪಾಕ್ಷಪ್ಪ ಗಾಣಿಗೇರ(70) ಎಂಬುವವರು ಆತ್ಮಹತ್ಯೆಗೆ ಶರಣಾದ ದುರ್ದೈವಿ. ಬಳಗಾನೂರು ಕೆವಿಜಿ ಬ್ಯಾಂಕ್ ನಲ್ಲಿ ₹2.80 ಲಕ್ಷ ಖಾಸಗಿಯಾಗಿ ₹5 ಲಕ್ಷ ಸಾಲ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚೆಗೆ ಸುರಿದ ಮಳೆಗೆ ಹೊಲದಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಈರುಳ್ಳಿ ಬೆಳೆ ಕೊಳೆತು ಹೋಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.