ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ನಿರಂತರ ಮಳೆ: ಎಚ್ಚರಿಕೆ ವಹಿಸುವಂತೆ ಲಕಮಾಪುರ ಗ್ರಾಮಸ್ಥರಿಗೆ ಸೂಚನೆ - Fear of flood in Lakhamapur village

ಬೆಳಗಾವಿ ಹಾಗೂ ಮಲಪ್ರಭಾ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಗದಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ. ಹಾಗಾಗಿ ತಾಲೂಕು ಆಡಳಿತ ಮಾಹಿತಿ ನೀಡಿದ ತಕ್ಷಣ ಕಾಳಜಿ ಕೇಂದ್ರಕ್ಕೆ ಜನರನ್ನು ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ.

Gadag
ತಹಶೀಲ್ದಾರ್ ಎ.ಡಿ. ಅಮರವಾದಗಿ ನೇತೃತ್ವದಲ್ಲಿ ಗ್ರಾಮಸ್ಥರ ಸಭೆ

By

Published : Jun 19, 2021, 2:15 PM IST

ಗದಗ: ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಗದಗ ಜಿಲ್ಲಾಡಳಿತ ಜಿಲ್ಲೆಯ ಹಲವು ಗ್ರಾಮಗಳ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಈ ಹಿನ್ನೆಲೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಲಕಮಾಪುರ ಗ್ರಾಮದಲ್ಲಿ ನರಗುಂದ ತಹಶೀಲ್ದಾರ್ ಎ.ಡಿ. ಅಮರವಾದಗಿ ನೇತೃತ್ವದಲ್ಲಿ ಗ್ರಾಮಸ್ಥರ ಸಭೆ ನಡೆಸಲಾಗಿದೆ.

ತಹಶೀಲ್ದಾರ್ ಎ.ಡಿ. ಅಮರವಾದಗಿ ನೇತೃತ್ವದಲ್ಲಿ ಗ್ರಾಮಸ್ಥರ ಸಭೆ

ಬೆಳಗಾವಿ ಹಾಗೂ ಮಲಪ್ರಭಾ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ. ಅಲ್ಲದೇ, ನೀರಿನ ಹರಿವು ಹೆಚ್ಚಾಗಿ ನವಿಲು ತೀರ್ಥ ಡ್ಯಾಂನಿಂದ ನೀರು ಹರಿಬಿಟ್ಟರೆ, ಲಕಮಾಪುರ ಗ್ರಾಮ ನಡುಗಡ್ಡೆಯಾಗುತ್ತದೆ. ಹಾಗಾಗಿ ತಾಲೂಕು ಆಡಳಿತ ಮಾಹಿತಿ ನೀಡಿದ ತಕ್ಷಣ ಕಾಳಜಿ ಕೇಂದ್ರಕ್ಕೆ ಜನರನ್ನು ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ.

ಒಂದು ವೇಳೆ ಪ್ರಭಾಹ ಉಂಟಾದರೆ ಲಕಮಾಪುರ ಗ್ರಾಮದ ಜನರು ಬೆಳ್ಳೇರಿ ಗ್ರಾಮದ ಕಾಳಜಿ ಕೇಂದ್ರಕ್ಕೆ ಬರುವಂತೆ ತಹಶೀಲ್ದಾರರು ಮನವಿ ಮಾಡಿದ್ದಾರೆ. ಈ ಕುರಿತು ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮದಲ್ಲಿ ನಿನ್ನೆ ಸಭೆ ನಡೆದಿದೆ. ಈ ಸಭೆಯಲ್ಲಿ ತಾಪಂ ಇಓ, ನರಗುಂದ ಸಿಪಿಐ ಭಾಗವಹಿಸಿದ್ದರು.

ಈ ಹಿಂದೆಯೂ ಹಲವು ಬಾರಿ ಲಕಮಾಪುರ ಗ್ರಾಮ ಮಲಪ್ರಭಾ ನದಿಯ ಪ್ರವಾಹಕ್ಕೆ ಸಿಲುಕಿತ್ತು. ಇಡೀ ಗ್ರಾಮದ ಸುತ್ತಮುತ್ತ ನೀರು ಆವರಿಸಿ ಗ್ರಾಮ ನಡುಗಡ್ಡೆಯಂತಾಗಿತ್ತು. ಹಾಗಾಗಿ ತಾಲೂಕು ಆಡಳಿತ ಈ ಬಾರಿ ಎಚ್ಚರಿಕೆ ವಹಿಸಿದೆ.

ಓದಿ:ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹದ ಭೀತಿಯಿಲ್ಲ: ಬೆಳಗಾವಿ ಡಿಸಿ

ABOUT THE AUTHOR

...view details