ಗದಗ:ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಇವರು ಪಾಲ್ಗೊಂಡಿದ್ದರು. ಸೋಂಕು ಪತ್ತೆ ಪರೀಕ್ಷೆ ನಡೆಸಿದಾಗ ಇವರಲ್ಲಿ ಕೊರೊನಾ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಈ ಸೋಂಕಿತರು ಫೆಬ್ರವರಿಯಲ್ಲಿ ಅಹಮದಾಬಾದ್ಗೆ ಪ್ರಯಾಣ ಬೆಳೆಸಿ, ಅಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಲಾಕ್ಡೌನ್ ಇದ್ದ ಕಾರಣದಿಂದ ಅಲ್ಲಿಯೇ ನೆಲೆಸಿದ್ದ ಇವರು ಲಾಕ್ಡೌನ್ ಸಡಿಲಿಕೆ ಬಳಿಕ ಮೇ 12ರಂದು ಗದಗ್ ನಗರಕ್ಕೆ ಆಗಮಿಸಿದ್ದರು.
ನಗರಕ್ಕೆ ಬಂದ ಎಲ್ಲರನ್ನೂ ಕನಗಿನಾಳದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇವರಲ್ಲಿ ಸೋಂಕು ಪತ್ತೆ ಪರೀಕ್ಷೆ ನಡೆಸಿದಾಗ 9 ಮಂದಿಯ ಪೈಕಿ, 4 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನುಳಿದವರಿಗೆ ನೆಗೆಟಿವ್ ಬಂದಿದೆ. ಇವರೆಲ್ಲಾ ಗದಗ-ಬೇಟಗೇರಿ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಸೋಂಕಿತರನ್ನು ಜಿಮ್ಸ್ನ ಐಸೋಲೇಷನ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ದಿನಗಳ ಹಿಂದಷ್ಟೇ ಕೊರೊನಾ ಮುಕ್ತವಾಗಿದ್ದ ಗದಗ ಜಿಲ್ಲೆಯಲ್ಲಿ ಮೂರು ಪ್ರಕರಣಗಳು ದೃಢಪಟ್ಟಿದ್ದವು. ಇಂದು ಮತ್ತೆ ನಾಲ್ಕು ದೃಢಪಟ್ಟಿದ್ದು ಸದ್ಯ ಸೋಕಿತರ ಸಂಖ್ಯೆ 7ಕ್ಕೆ ಏರಿದ್ದು ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ.