ಗದಗ: ನಗರದ ಜಿಲ್ಲಾಸ್ಪತ್ರೆಯ ಓರ್ವ ವೈದ್ಯ ಮತ್ತು ಒಬ್ಬ ಲ್ಯಾಬ್ ಟೆಕ್ನಿಶಿಯನ್ ಸಿಬ್ಬಂದಿ ಸೇರಿ ಒಟ್ಟು ನಾಲ್ಕು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.
ಗದಗ: ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಸೇರಿ ನಾಲ್ವರಿಗೆ ಕೊರೊನಾ!
ಗದಗದಲ್ಲಿ ಇಂದು ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
29 ವರ್ಷದ P-5014, 28 ವರ್ಷದ P-5015, 32 ವರ್ಷದ P-5016, 29 ವರ್ಷದ P-5017 ಸೋಂಕಿತ ವ್ಯಕ್ತಿಗಳು. ಈ ಪೈಕಿ ಗದಗ ಜಿಲ್ಲಾಸ್ಪತ್ರೆಯ ಓರ್ವ ವೈದ್ಯ ಮತ್ತು ಒಬ್ಬ ಲ್ಯಾಬ್ ಟೆಕ್ನಿಶಿಯನ್ ಸಿಬ್ಬಂದಿ ಸೇರಿದಂತೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಓರ್ವ ವ್ಯಕ್ತಿ ಹಾಗೂ ಇನ್ನೋರ್ವ ಲಕ್ಕುಂಡಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ವ್ಯಕ್ತಿ ಗೋವಾಗೆ ತೆರಳುವ ವೇಳೆ ಕೊರೊನಾ ವೈರಸ್ ಸಂಬಂಧ ಪರೀಕ್ಷೆ ಮಾಡಿಸಿಕೊಂಡಾಗ ಸೋಂಕು ಇರುವುದು ದೃಢಪಟ್ಟಿದೆ.
ಜೂ. 3ರಂದು ಇದೇ ಗ್ರಾಮದಲ್ಲಿ 44 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41ಕ್ಕೆ ಏರಿದ್ದು, ಈ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. 26 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 13 ಮಂದಿ ಸೋಂಕಿತರು ಜಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.