ಗದಗ:ಕಾಡು ಪ್ರಾಣಿಗಳು ಆಹಾರ ಅರಸಿ ಕಾಡಿನಿಂದ ನಾಡಿಗೆ ಬರುವುದು ಸಾಮಾನ್ಯವಾಗಿದೆ. ಅರಣ್ಯ ಪ್ರದೇಶಕ್ಕೆ ಹತ್ತಿರವಿರುವ ಊರುಗಳಲ್ಲಿ ಬಂದು ಸಾಕು ಪ್ರಾಣಿಗಳು ಅಥವಾ ಮನುಷ್ಯರ ಮೇಲೆ ದಾಳಿ ನಡೆಸಿರುವ ಘಟನೆಗಳು ಸಾಕಷ್ಟು ನಡೆದಿವೆ. ಆದ್ರೆ ನಗರದ ಜನದಟ್ಟನೆ ಪ್ರದೇಶದಲ್ಲಿ ನರಿಯೊಂದು ಪ್ರತ್ಯಕ್ಷವಾಗಿದೆ.
ಪಾಳು ಬಿದ್ದಿರುವ ಪ್ರದೇಶದಲ್ಲಿ ಆಹಾರಕ್ಕಾಗಿ ಹುಡುಕಾಟ ನಡೆಸಿದ ನರಿಯ ಮೇಲೆ ನಾಯಿಗಳು ದಾಳಿ ನಡೆಸಿವೆ. ಇದನ್ನು ಕಂಡ ಸ್ಥಳೀಯ ಯುವಕರು ಅದನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.