ಗದಗ : ಶೇರ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಮಾಡಿ ಕೊಡುವುದಾಗಿ ಹೇಳಿ ಗ್ರಾನೈಟ್ ಉದ್ಯಮಿಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಗದಗನಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಗ್ರಾನೈಟ್ ಉದ್ಯಮಿ ಪ್ರಕಾಶ್ ಮಲ್ಲನಗೌಡರ ಪಾಟೀಲ್ ವಂಚನೆಗೊಳಗಾದವರು. ದಾವಣಗೆರೆ ಮೂಲದ ವಿನಯ್ ಯಲಿಗಾರ ಮತ್ತು ಶಂಕರ್ ಯಲಿಗಾರ ಎಂಬುವವರು ತಮ್ಮ ವಿವೈ ಕ್ಯಾಪಿಟಲ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ತಾವು ಕಟ್ಟಿದ ಹಣಕ್ಕೆ ನಾಲ್ಕು ತಿಂಗಳಿಗೊಮ್ಮೆ ಶೇ 30 ರಷ್ಟು ಹಣ ಲಾಭ ಪಡೆಯಬಹುದು ಎಂದು ಉದ್ಯಮಿಗೆ ಸುಳ್ಳು ಮನವರಿಕೆ ಮಾಡಿದ್ದರು.