ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - Gadag Protest News

ರಾಜ್ಯ ಸರ್ಕಾರದ ವಿವಿಧ ಕಾಯ್ದೆಗಳ ವಿರುದ್ಧ ಗದಗ ಜಿಲ್ಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Gadag: Congress protests against state government
ಗದಗ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

By

Published : Aug 21, 2020, 10:52 AM IST

ಗದಗ:ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿವಿಧ ಕಾಯ್ದೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರ ಜನ ವಿರೋಧಿ ಆಡಳಿತ ನಡೆಸುತ್ತಿವೆ ಎಂದು ಆರೋಪಿಸಿದರು. ಜನ ವಿರೋಧಿ ನೀತಿಯಿಂದ ನಿರುದ್ಯೋಗ ಸೃಷ್ಟಿಯಾಗಿದೆ. ರೈತರು ಮತ್ತು ಕಾರ್ಮಿಕ ವರ್ಗ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಇದಕ್ಕೆಲ್ಲ ಅಂತ್ಯ ಹಾಡಬೇಕು ಅಂದರೆ ಇಂತಹ ಜನ ವಿರೋಧಿ ಕಾಯ್ದೆಗಳನ್ನು ಸರ್ಕಾರಗಳು ಕೈ ಬಿಡಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details