ಗದಗ:ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿದ್ದ ಮೂವರು ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವೈದ್ಯರು ಹಾಗೂ ಇತರ ಸಿಬ್ಬಂದಿಗೆ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹಾಗೂ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.
ಗದಗದಲ್ಲಿ ಯಾವುದೇ ಕೊರೊನಾ ಪ್ರಕರಣಗಳು ಉಳಿದಿಲ್ಲ...ಜಿಲ್ಲಾಧಿಕಾರಿ ಸ್ಪಷ್ಟನೆ - Gadag corona cases
ಗದಗದಲ್ಲಿ ಐವರಿಗೆ ಕೊರೊನಾ ಸೋಂಕು ತಗುಲಿದ್ದು ಅದರಲ್ಲಿ ಓರ್ವ ವೃದ್ಧೆ ಸಾವನ್ನಪ್ಪಿದ್ದರು. ಉಳಿದ ನಾಲ್ವರೂ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇಂದಿಗೆ ಯಾವುದೇ ಕೊರೊನಾ ಪ್ರಕರಣಗಳು ಬಾಕಿ ಉಳಿದಿಲ್ಲ ಎಂದು ಜಿಲ್ಲಾದಿಕಾರಿ ಸ್ಪಷ್ಟಪಡಿಸಿದ್ದಾರೆ.
ಗದಗ ಜಿಲ್ಲೆಯ ಬೆಟಗೇರಿ ನಗರದಲ್ಲಿ 5 ಮಂದಿ ಕೊರೊನಾ ಸೋಂಕಿತರಿದ್ದರು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತಿದ್ದ ಪಿ-166 ವೃದ್ಧೆ (80) ಏಪ್ರಿಲ್ 9 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ವೃದ್ಧೆಯ ಸಂಪರ್ಕದಲ್ಲಿದ್ದ ಪಿ-370 (59) ಗುಣಮುಖರಾಗಿ ಮೇ 1 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆಯುಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ-370, ಪಿ-396 ಹಾಗೂ ಪಿ-514 ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಮೇ 9 ರ ಅಂತ್ಯದ ವೇಳೆಗೆ ಗದಗ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣಗಳು ಬಾಕಿ ಉಳಿದಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.