ಗದಗ:ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಉತ್ತಮವಾಗಿ ಮಳೆಯಾಗುತ್ತಿದ್ದು ಅನ್ನದಾತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಸರಿಯಾಗಿ ರಸಗೊಬ್ಬರ ಸಿಗದೆ ರೈತರಿಗೆ ಸಮಸ್ಯೆ ಎದುರಾಗಿದೆ.
ಲಕ್ಷ್ಮೇಶ್ವರ ಭಾಗದಲ್ಲಿ ಧಾರವಾಡ ತಾಲೂಕಿನ ಕುಂದಗೋಳ ಹಾಗೂ ಹಾವೇರಿ ಜಿಲ್ಲೆಯ ಸವಣೂರಿನ ರೈತರು, ಮುಂಡರಗಿ ಭಾಗದಲ್ಲಿ ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಯ ರೈತರು, ರೋಣ ಭಾಗದಲ್ಲಿ ಬಾಗಲಕೋಟೆ ಜಿಲ್ಲೆಯವರು, ನರಗುಂದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ರೈತರು ರಸಗೊಬ್ಬರ ಖರೀದಿ ಮಾಡುತ್ತಿದ್ದಾರೆ. ಹಾಗಾಗಿ, ನಮಗೆ ಗೊಬ್ಬರ ಸಿಗುತ್ತಿಲ್ಲ ಎಂದು ಜಿಲ್ಲೆಯ ರೈತರು ಆರೋಪ ಮಾಡಿದ್ದಾರೆ.
ನಾವು ಆಧಾರ ಕಾರ್ಡ್, ಜಮೀನಿನ ಪಹಣಿ ಪತ್ರ ನೀಡಿದರೂ, ಒಂದು, ಎರಡು ಚೀಲ ಗೊಬ್ಬರ ನೀಡುತ್ತಾರೆ. ಆದರೆ, ಅಕ್ಕ ಪಕ್ಕದ ಜಿಲ್ಲೆಯ ರೈತರಿಂದ ಹೆಚ್ಚಿನ ಹಣ ಪಡೆದು, ಅವರಿಗೆ ಬೇಕಾಗುವಷ್ಟು ಗೊಬ್ಬರ ಕೊಡ್ತಿದ್ದಾರೆ ಎಂದು ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.