ಗದಗ: ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ನಡೆದಿದೆ.
ವಿಜಯ ಕುಮಾರ್ ಭಜಂತ್ರಿ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಿನ್ನೆ ಹಮ್ಮಿಗಿ ಗ್ರಾಮ ಪಂಚಾಯಿತಿಯಲ್ಲಿ ನಾಮಪತ್ರ ಸಲ್ಲಿಸಿದ್ದ ವಿಜಯ ಕುಮಾರ್, ಇಂದು ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.