ಗದಗ:ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ 95,233 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಅಂದಾಜು 812.50 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.
ಗದಗ: ನಿರಂತರ ಮಳೆಗೆ ಹೆಕ್ಟೇರ್ಗಟ್ಟಲೆ ಬೆಳೆ ಹಾನಿ, ಅಪಾರ ನಷ್ಟ - Gadag Latest News Update
ಗದಗ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ 95,233 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, ಅಂದಾಜು 812.50 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.
ಅಕ್ಟೋಬರ್ ತಿಂಗಳಲ್ಲಿ ಸುರಿದ ಮಳೆಗೆ 736 ಮನೆಗಳು ಹಾನಿಗೀಡಾಗಿವೆ. ಇಬ್ಬರು ಸಾವನ್ನಪ್ಪಿದ್ದಾರೆ. 41491 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ ಹಾಗೂ 12,290.6 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಒಟ್ಟಾರೆ ಇದುವರೆಗೂ ಜಿಲ್ಲೆಯಲ್ಲಿ 1,615 ಮನೆಗಳು ಹಾನಿಗೀಡಾಗಿದ್ದು, 812.50 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಒಟ್ಟು 5 ಮಂದಿ ಜೀವ ಕಳೆದುಕೊಂಡಿದ್ದಾರೆ. 17 ಜಾನುವಾರುಗಳ ಜೀವಹಾನಿ ಸಂಭವಿಸಿದೆ. ಒಟ್ಟು 95233 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಸುಮಾರು 7398.95 ಲಕ್ಷ ರೂಪಾಯಿ ನಷ್ಟ ಹಾಗೂ 25,006.14 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಅಂದಾಜು 915.42 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.