ಗದಗ :ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿ ರಸ್ತೆಗಿಳಿದವರ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ.
ಶುಕ್ರವಾರ ಒಂದೇ ದಿನ ನಿಯಮ ಉಲ್ಲಂಘಿಸಿದ 105 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೋಣ, ಗದಗ, ಲಕ್ಷ್ಮೇಶ್ವರ, ಗಜೇಂದ್ರಗಡ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಟೋ, ಬೈಕ್ ಸೇರಿದಂತೆ ಹಲವು ವಾಹನಗಳನ್ನು ಸೀಜ್ ಮಾಡಲಾಗಿದೆ.