ಕರ್ನಾಟಕ

karnataka

ETV Bharat / state

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಖದೀಮರ ಬಂಧನ - ಗದಗ ಮನೆ ಕಳ್ಳರ ಬಂಧನ ಸುದ್ದಿ

ನಗರದಲ್ಲಿ ಮನೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ.

gadag-police-arrested-thieves
ಮನೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ಖದೀಮರು ಅಂದರ್

By

Published : Jan 19, 2020, 8:17 PM IST

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ ಪವಾರ ಹಾಗೂ ಅಸ್ಲಂ ಡಾಲಾಯತ್ ಬಂಧಿತ ಆರೋಪಿಗಳು. ಆರೋಪಿಗಳಿಂದ 1 ಲಕ್ಷ 10 ಸಾವಿರ ರೂಪಾಯಿ ಮೌಲ್ಯದ ಎರಡು ಟಿವಿ, ಒಂದು ಬೈಕ್ ಹಾಗೂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿಗೆ ಆರ್.ಕೆ.ನಗರ ಹಾಗೂ ಸಾರಿಗೆ ನಗರದಲ್ಲಿ ಮನೆ ಕಳ್ಳತನ ಮಾಡಿ, ತಲೆಮರೆಸಿಕೊಂಡು ಓಡಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಗದಗ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ABOUT THE AUTHOR

...view details