ಹುಬ್ಬಳ್ಳಿ: ನಗರದ ಗದಗ ರಸ್ತೆ ರೈಲ್ವೆ ಆಸ್ಪತ್ರೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಇಬ್ಬರನ್ನು ಬಂಧಿಸುವಲ್ಲಿ ಸಿಇಎನ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಅಂದಾಜು 4ಲಕ್ಷ ರೂ. ಮೌಲ್ಯದ 20 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಂಧಿತರು ಕಾಲೇಜ್ ಬ್ಯಾಗ್ನಲ್ಲಿ ಆಂಧ್ರಪ್ರದೇಶದಿಂದ ನಗರಕ್ಕೆ ಗಾಂಜಾ ತೆಗೆದುಕೊಂಡು ಬಂದು ಇಲ್ಲಿನ ಗದಗ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಸಿಇಎನ್ ಕ್ರೈಂ ಠಾಣೆ ಪಿಎಸ್ಐಗಳಾದ ರಮೇಶ್ ಪಾಟೀಲ್, ಮತ್ತು ಅನ್ನಪೂರ್ಣ ಆರ್.ಎಂ. ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.