ಗದಗ:ಜಿಲ್ಲೆಯಲ್ಲಿ ಇಂದು ಮತ್ತೆರಡು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಗದಗದಲ್ಲಿ ಮತ್ತೆರಡು ಕೊರೊನಾ ಕೇಸ್ ಪತ್ತೆ: 20ಕ್ಕೆ ಏರಿದ ಸೋಂಕಿತರ ಸಂಖ್ಯೆ
ಪಿ-1566, 32 ವರ್ಷದ ವ್ಯಕ್ತಿ ಹಾಗೂ ಪಿ-1567, 38 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಇವರು ಅಂತಾರಾಜ್ಯ ಪ್ರವಾಸದ ಹಿನ್ನೆಲೆ ಹೊಂದಿದ್ದಾರೆ.
ಪಿ-1566, 32 ವರ್ಷದ ವ್ಯಕ್ತಿ ಹಾಗೂ ಪಿ-1567, 38 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಇವರು ಅಂತಾರಾಜ್ಯ ಪ್ರವಾಸದ ಹಿನ್ನೆಲೆ ಹೊಂದಿದ್ದಾರೆ. ಮಹಾರಾಷ್ಟ್ರದ ಮುಂಬೈನಿಂದ ಬಂದ್ ಪಿ-1566, 32 ವರ್ಷ ಹಾಗೂ ಛತ್ತೀಸ್ಘಡ ರಾಜ್ಯದಿಂದ ಬಂದಿದ್ದ ಪಿ-1567, 38 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಇಬ್ಬರೂ ಸೋಂಕಿತರನ್ನು ಜಿಮ್ಸ್ ಆಸ್ಪತ್ರೆಯ ಕೊರೊನಾ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಜಿಲ್ಲೆಯಲ್ಲಿ ಒಟ್ಟು 20 ಸೋಂಕಿತರ ಪೈಕಿ ಮೊದಲನೇ ಸೋಂಕಿತ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. 5 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದ 14 ಜನ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಸಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.