ಕರ್ನಾಟಕ

karnataka

ETV Bharat / state

ಗದಗ: ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ! - ಪ್ರಾಚಾರ್ಯ ಮೋಹನ್ ನಿಧನ

ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ - ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಘಟನೆ.

Representative image
ಪ್ರಾತಿನಿಧಿಕ ಚಿತ್ರ

By

Published : Jun 19, 2023, 10:04 AM IST

ಗದಗ/ಬಳ್ಳಾರಿ: ಬಾವಿಗೆ ಹಾರಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ಕುಮಾರಸ್ವಾಮಿ ಚಿದಾನಂದಯ್ಯ ಬರದೂರಮಠ (45) ಆತ್ಮಹತ್ಯೆಗೆ ಶರಣಾದ ಸರ್ಕಾರಿ ವೈದ್ಯ.

ಬಾವಿಯಲ್ಲಿ ಶವ ಪತ್ತೆ: ಕುಮಾರಸ್ವಾಮಿ ಅವರು ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಆದರೆ, ತಡರಾತ್ರಿ ಅವರ ಸ್ವಂತ ಜಮೀನಿನ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅವರು ಹಿರಿಯ ಆರೋಗ್ಯ ನಿರೀಕ್ಷಣಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಕುಮಾರಸ್ವಾಮಿ ಅವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:Tragedy Honeymoon: ಹನಿಮೂನ್​ಗೆಂದು ಇಂಡೋನೇಷ್ಯಾಕ್ಕೆ ತೆರಳಿದ್ದ ವೈದ್ಯ ದಂಪತಿ ಸಮುದ್ರಪಾಲು!

ಪ್ರಾಚಾರ್ಯ ಮೋಹನ್ ನಿಧನ: ಬಳ್ಳಾರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮೋಹನ್ (58) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಾಯಿ, ಓರ್ವ ಅಣ್ಣ, ಐವರು ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಹೊಸಪೇಟೆಯ ತಂಗಿ ಮನೆಗೆ ತೆರಳಿದ್ದರು. ಮಧ್ಯಾಹ್ನ ಮಲಗಿದ್ದ ವೇಳೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ವಗ್ರಾಮ ಸಂಡೂರು ತಾಲೂಕಿನ ಗೊಲ್ಲಲಿಂಗಮ್ಮನ ಹಳ್ಳಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಅವರು ರಂಗಭೂಮಿಯ ಬಗ್ಗೆ ಅಪಾರ ಒಲವು ಹೊಂದಿದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಗತಿಗಾಗಿ ಅಪಾರವಾಗಿ ಶ್ರಮಿಸಿದ್ದರು. ಬಡ ವಿದ್ಯಾರ್ಥಿಗಳಿಗೆ ತಾವೇ ಶೈಕ್ಷಣಿಕ ಶುಲ್ಕ ಭರಿಸುವ ಮೂಲಕ ನೆರವಾಗುತ್ತಿದ್ದರು. ಮೃತರ ನಿಧನಕ್ಕೆ ಬಳ್ಳಾರಿ ಜಿಲ್ಲಾ ಕಲಾವಿದರ ವೇದಿಕೆ, ಸರ್ಕಾರಿ ಪದವಿ ಕಾಲೇಜುಗಳ ಪ್ರಾಚಾರ್ಯರ ಸಂಘ ಹಾಗೂ ಉಪನ್ಯಾಸಕರ ಸಂಘಗಳು ಸಂತಾಪ ಸೂಚಿಸಿವೆ.

ಇದನ್ನೂ ಓದಿ:Belagavi Crime: ಕುಡಿತದಿಂದ ಕೌಟುಂಬಿಕ ಕಲಹ.. ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ: ತಂದೆಯೊಬ್ಬ ತನ್ನ ಮಗ ಹಾಗೂ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮನಕಲುಕುವ ಘಟನೆ‌ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದ ಬಳಿ ಪೋಚಾವರಂದಲ್ಲಿ ನಿನ್ನೆ (ಭಾನುವಾರ) ನಡೆದಿದೆ. ಚಿಂಚೋಳಿ ತಾಲೂಕು ಕುಂಚಾವರಂ ಗ್ರಾಮದ ಹಾಗೂ ಸದ್ಯ ತೆಲಂಗಾಣದಲ್ಲಿ ವಾಸವಾಗಿದ್ದ ಹಣಮಂತ ವಡ್ಡರ್ (40) ಹಾಗೂ ಆತನ ಪುತ್ರ ಓಂಕಾರ (9), ಪುತ್ರಿ ಅಕ್ಷರಾ (6) ಮೃತರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಚಿಂಚೋಳಿ ಡಿಎಸ್​ಪಿ ಕೆ.ಬಸವರಾಜ, ಚಿಂಚೋಳಿ ಸಿಪಿಐ ಅಂಬಾರಾಯ ಕಮಾಲಮನಿ, ಕುಂಚಾವರಂ ಪಿಎಸ್ಐ ಉದಂಡಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಕಲಬುರಗಿಯಲ್ಲಿ ಇಬ್ಬರು‌ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ‌

ABOUT THE AUTHOR

...view details