ಗದಗ :ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಹೆಡ್ ಕಾನ್ಸ್ಟೇಬಲ್ ಡೆತ್ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗದಲ್ಲಿ ಡಿಎಆರ್ ಹೆಡ್ ಕಾನ್ಸ್ಟೇಬಲ್ ಆಗಿದ್ದ ಕೆ.ಎಸ್.ಕೊಪ್ಪದ ಕರ್ತವ್ಯಯಲ್ಲಿರುವಾಗಲೇ ಭದ್ರತೆಗೆ ನೀಡಲಾಗಿದ್ದ 303 ರೈಫಲ್ನಿಂದ ಕುತ್ತಿಗೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೇದೆ ಗದಗ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಖಜಾನೆ ಕಚೇರಿಯ ಭದ್ರತಾ ಕೊಠಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಮಧ್ಯಾಹ್ನದಿಂದ ಸಂಜೆ 9 ಗಂಟೆಗೆ ಡ್ಯೂಟಿ ಇತ್ತು. ಆದರೆ, ಇನ್ನೊಬ್ಬ ಪೇದೆ ಬಂದು ಇವರನ್ನು ರಿಲೀವ್ ಮಾಡುವ ಹೊತ್ತಿಗೆ ಅಂದರೆ ಸುಮಾರು 8.30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪೇದೆ ಕಾಣಿಸಿಕೊಂಡಿದ್ದರು. ಬಳಿಕ ವಿಷಯ ಬೆಳಕಿಗೆ ಬಂದಿದೆ.