ಕರ್ನಾಟಕ

karnataka

ETV Bharat / state

ಲಾಕ್‌ಡೌನ್‌ನಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿದೆ: ಸಚಿವ ಡಾ.ಕೆ.ಸುಧಾಕರ್ - Minister Sudhakar held the Covid progress review meeting

ಗದಗದಲ್ಲಿ ಕೊರೊನಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಆರೋಗ್ಯ ಸಚಿವ ಡಾ.ಸುಧಾಕರ್​, ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎನ್ನುವುದಕ್ಕೆ ಪ್ರಸ್ತುತ ಅಂಕಿ ಅಂಶಗಳೇ ಸಾಕ್ಷಿ. ಸೋಂಕಿತರ ಜೀವ ಹಾನಿ ತಪ್ಪಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಅನುಸರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Health minister sudhakar meeting in Gadag
ಸಚಿವ ಡಾ.ಕೆ.ಸುಧಾಕರ್

By

Published : May 23, 2021, 7:04 AM IST

Updated : May 23, 2021, 10:15 AM IST

ಗದಗ:ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರ ಜೀವ ಹಾನಿ ತಡೆಯುವಲ್ಲಿ ಸರ್ಕಾರದ ಮಾರ್ಗಸೂಚಿಗಳ ಪಾಲನೆಯಾಗಲಿ. ಕೋವಿಡ್ ತಪಾಸಣಾ ವರದಿಯನ್ನು 24 ಗಂಟೆಯೊಳಗೆ ನೀಡುವ ಮೂಲಕ ಸೋಂಕು ಇನ್ನೊಬ್ಬರಿಗೆ ಹರಡುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಕೋವಿಡ್ ಪ್ರಗತಿ ಪರಿಶೀಲನಾ ಸಭೆ:

ಗದಗ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಲಾದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯ ನಂತರ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಚಿವ ಡಾ.ಕೆ.ಸುಧಾಕರ್

ಕೋವಿಡ್ ಸೋಂಕಿನ ವರದಿಯನ್ನು ಶೀಘ್ರವಾಗಿ ನೀಡುವ ಮೂಲಕ ಸೋಂಕಿತರಿಗೆ ಸುಸಮಯದಲ್ಲಿ ಚಿಕಿತ್ಸೆ ಒದಗಿಸಬೇಕು. ಸೋಂಕಿತರ ಜೀವ ಹಾನಿ ತಡೆಯಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಅನುಸರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಉತ್ತಮ ಚಿಕಿತ್ಸೆ ಹಾಗೂ ವ್ಯವಸ್ಥೆಯನ್ನು ಕಲ್ಪಿಸಬೇಕು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅಗತ್ಯವಿರುವ ತಜ್ಞ ವೈದ್ಯರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ 1,060 ಟನ್ ಆಕ್ಸಿಜನ್:

ಕೇಂದ್ರದಿಂದ ಈ ಮೊದಲು ರಾಜ್ಯಕ್ಕೆ 230 ಟನ್ ಆಕ್ಸಿಜನ್ ಹಂಚಿಕೆಯಾಗುತ್ತಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಕ್ರಿಯ ಕಾರ್ಯದಿಂದಾಗಿ ಈಗ ರಾಜ್ಯಕ್ಕೆ 1,060 ಟನ್ ಆಕ್ಸಿಜನ್ ಹಂಚಿಕೆಯಾಗಿದೆ.

ರಾಜ್ಯದಲ್ಲಿ ಒಟ್ಟಾರೆ 35,000 ಆಕ್ಸಿಜನ್ ಬೆಡ್​ಗಳ ವ್ಯವಸ್ಥೆ:

ಕೋವಿಡ್‌ಗೂ ಮೊದಲು ರಾಜ್ಯದಲ್ಲಿ 2,000 ಆಕ್ಸಿಜನ್ ಬೆಡ್‌ಗಳ ಸಾಮರ್ಥ್ಯವಿತ್ತು. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟಾರೆ 35,000 ಆಕ್ಸಿಜನ್ ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಿರಂತರವಾಗಿ ಸಾಗಿದೆ. ಆರೋಗ್ಯ ಕ್ಷೇತ್ರದ ಸಾಧನೆಯಲ್ಲಿ ರಾಷ್ಟ್ರದಲ್ಲಿ ರಾಜ್ಯ ಒಂದನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 1.20 ಕೋಟಿ ಜನಕ್ಕೆ ಲಸಿಕೆ ನೀಡಲಾಗಿದೆ. 2 ಕೋಟಿ ಡೋಸ್ ಲಸಿಕೆಗೆ ಗ್ಲೋಬಲ್ ಟೆಂಡರ್ ಕರೆಯಲಾಗಿದೆ. ಕೇಂದ್ರ ಸರ್ಕಾರದ ಪ್ರತಿದಿನ ರಾಜ್ಯಕ್ಕೆ ಉಚಿತವಾಗಿ ಲಸಿಕೆ ಪೂರೈಕೆ ಮಾಡುತ್ತಿದೆ. 1.15 ಕೋಟಿ ಡೋಸ್ ಕೇಂದ್ರ ಸರ್ಕಾರ ರಾಜ್ಯಕ್ಕೆ ಲಸಿಕೆ ನೀಡಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:ಗದಗ್​ ಡಿಹೆಚ್​ಓಗೆ ಸಚಿವರ ತರಾಟೆ: 'ದನಾ ಕಾಯೋಕ್​ ಹೋಗು' ಎಂದ ಸಿ.ಸಿ.ಪಾಟೀಲ

ಲಾಕ್‌ಡೌನ್‌ನಿಂದಾಗಿ ಸೋಂಕು ನಿಯಂತ್ರಣ:

ಲಾಕ್‌ಡೌನ್‌ನಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎನ್ನುವುದಕ್ಕೆ ಪ್ರಸ್ತುತ ಅಂಕಿ ಅಂಶಗಳೇ ಸಾಕ್ಷಿಯಾಗಿವೆ. ಸಾರ್ವಜನಿಕರು ಎರಡು ಡೋಸ್‌ಗಳ ಲಸಿಕೆ ಪಡೆಯುವವರೆಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಸರಿಯಾಗಿ ಪಾಲಿಸಬೇಕು. ಗದಗ ಜಿಲ್ಲೆಯಲ್ಲಿನ ಆರೋಗ್ಯ ವ್ಯವಸ್ಥೆ ಇನ್ನಷ್ಟು ಸುಧಾರಿಸಲು ಪ್ರಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಪ್ರತಿ ತಾಲೂಕಿನಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಕ್ರಮ:

ಸಚಿವರು ಪ್ರತಿ ತಾಲೂಕಿನಲ್ಲಿ 500 ಎಲ್​ಪಿಎಮ್ ಸಾಮರ್ಥ್ಯದ ಆಕ್ಸಿಜನ್ ಘಟಕ ಸ್ಥಾಪನೆಗೆ ಸೂಕ್ತ ಕ್ರಮ ವಹಿಸಲಾಗುವುದು. ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಔಷಧಿ ಸಾಮಗ್ರಿಗಳ ಕೊರತೆಯಾಗದಂತೆ ನಿಗಾ ವಹಿಸಲಾಗುತ್ತಿದೆ. ಹೊಸದಾಗಿ ಕಂಡು ಬಂದಿರುವ ಬ್ಲಾಕ್ ಫಂಗಸ್ ರೋಗ ಚಿಕಿತ್ಸೆಗೆ ಮಾರ್ಗಸೂಚಿಗಳನ್ನು ನೀಡಲಾಗಿದ್ದು ಗದಗ ಜಿಮ್ಸ್​ನಲ್ಲಿಯೂ ಸಹ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:'ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು' : ಕೋವಿಡ್​ ವಾರ್ಡ್​​ನಲ್ಲಿ ಪಿಪಿಇ ಕಿಟ್​ ಧರಿಸಿ ವೈದ್ಯರ ಡ್ಯಾನ್ಸ್​

Last Updated : May 23, 2021, 10:15 AM IST

For All Latest Updates

TAGGED:

ABOUT THE AUTHOR

...view details