ಗದಗ:ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಗೆ ಗದಗ ತತ್ತರ: ಮನೆಗಳಿಗೆ ನುಗ್ಗಿದ ನೀರು - ಮಳೆ ಸುದ್ದಿ
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಜಲ್ಲಿಗೇರಿ ತಾಂಡಾದಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಗೆ ಗದಗ ತತ್ತರ
ಶಿರಹಟ್ಟಿ ತಾಲೂಕಿನ ಜಲ್ಲಿಗೇರಿ ತಾಂಡಾದ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು, ರಾತ್ರಿಯಿಡೀ ಗ್ರಾಮಸ್ಥರು ಪರದಾಡಿದ್ದಾರೆ.
ಜಮೀನುಗಳಿಗೂ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇಷ್ಟೆಲ್ಲಾ ಅವಾಂತರ ಸೃಷ್ಟಿಯಾಗಿದ್ದರೂ ಸಹ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರ ಸಮಸ್ಯೆ ಆಲಿಸಿಲ್ಲ ಎಂದು ಕಿಡಿಕಾರಿದ್ದಾರೆ.