ಗದಗ: ಜಿಲ್ಲೆಯ ಶಿರಹಟ್ಟಿ ಪಟ್ಟಣದ ಗ್ರಾಮ ದೇವತೆಯಾದ ದ್ಯಾಮವ್ವ ದೇವಿಯ ಜಾತ್ರೆಯನ್ನು ಮೂರು ವರ್ಷಕ್ಕೆ ಒಂದು ಸಾರಿ ಮಾಡಲಾಗುತ್ತದೆ. ಹಿಂದೂ- ಮುಸ್ಲಿಂ ಸೇರಿದಂತೆ ಎಲ್ಲಾ ಸಮುದಾಯದ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾಗುವುದು ವಿಶೇಷತೆ.
ಮೂರು ವರ್ಷಕ್ಕೊಮ್ಮೆ ದೇವಿಯ ಮೂರ್ತಿಗೆ ಬಣ್ಣ ಹಚ್ಚುವ ಕಾರ್ಯ ನಡೆಯುತ್ತದೆ. ಆಗ ಇಡೀ ಗ್ರಾಮದ ಪ್ರತಿಯೊಂದು ಮನೆಗೆ ತೆರಳುತ್ತಾಳೆ. ಆ ಸಂದರ್ಭದಲ್ಲಿ ಭಕ್ತರು ಹಣ್ಣು, ಕಾಯಿ ಹೂ ಹಾಕಿ ದೇವಿಯ ದರ್ಶನ ಪಡೆಯುತ್ತಾರೆ. ಈ ಹಿಂದೆ ಐದು ವರ್ಷಕ್ಕೆ ಒಂದು ಸಾರಿ ದೇವಿಯ ಮೂರ್ತಿಯ ಉತ್ಸವ ಮಾಡಲಾಗುತ್ತಿತ್ತು. ಆದ್ರೆ ಕಳೆದ 20 ವರ್ಷಗಳಿಂದ ಮೂರು ವರ್ಷಕ್ಕೆ ಒಂದು ಸಾರಿ ದೇವಿಯ ಮೆರವಣಿಗೆ ಮಾಡಲಾಗುತ್ತದೆ.