ಗದಗ:ಆಶ್ರಯ ಮನೆ ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಪಟ್ಟಣದ ರೋಣ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಡೆದಿದೆ. ರೋಣ ತಾಲೂಕಿನ ಗಾಡಗೋಳಿ ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಶ್ರಯ ಮನೆಯ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನೆ ಆರಂಭವಾಗಿ ಕೆಲವೇ ಹೊತ್ತಲ್ಲಿ ಜೇನುಹುಳುಗಳು ದಾಳಿ ನಡೆಸಿದವು. ಜೇನುಹುಳುಗಳ ದಾಳಿಯಿಂದ ಪ್ರತಿಭಟನಾನಿರತರು, ಪತ್ರಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ತಪ್ಪಿಸಿಕೊಂಡು ಸ್ಥಳದಿಂದ ಬೇರೆಡೆ ತೆರಳಿದರು.