ಕರ್ನಾಟಕ

karnataka

ETV Bharat / state

ಅಕ್ರಮ ಅನ್ನಭಾಗ್ಯ ಸಾಗಣೆ: ಗದಗದಲ್ಲಿ ಅಕ್ಕಿ ಸಹಿತ ಲಾರಿ ವಶಕ್ಕೆ - undefined

ಅಕ್ರಮವಾಗಿ ಅನ್ನಭಾಗ್ಯಯೋಜನೆಯ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಪತ್ತೆ ಮಾಡಿದ್ದಾರೆ. ಗದಗ ನಗರದ ವರ್ತುಲ ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಹಿಡಿದು, ಆಹಾರ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳಿಗಳಿಗೆ ಒಪ್ಪಿಸಲಾಗಿದೆ.

ಅನ್ನಭಾಗ್ಯ

By

Published : Jul 20, 2019, 1:30 PM IST

ಗದಗ:ಹಸಿದವರ ಹೊಟ್ಟೆ ತುಂಬಿಸಲು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಲೂಟಿಕೋರರ ಪಾಲಾಗುತ್ತಿದೆ. ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನ ಸಂಘಟನೆಯೊಂದರ ಕಾರ್ಯಕರ್ತರು ಹಿಡಿದಿರುವ ಘಟನೆ ನಗರದ ರಿಂಗ್ ರಸ್ತೆಯಲ್ಲಿ ನಡೆದಿದೆ.

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಪತ್ತೆ ಮಾಡಿದ್ದಾರೆ. ಗದಗ ನಗರದ ರಿಂಗ್ ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಹಿಡಿದು, ಆಹಾರ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳಿಗಳಿಗೆ ಒಪ್ಪಿಸಲಾಗಿದೆ.

ಗದಗದಲ್ಲಿ ಅಕ್ರಮ ಅನ್ನಭಾಗ್ಯ ಅಕ್ಕಿ ಸಹಿತ ಲಾರಿ ವಶಕ್ಕೆ

ಕೊಪ್ಪಳದಿಂದ ಮಹಾರಾಷ್ಟ್ರ ರಾಯಗಡಕ್ಕೆ ಅಕ್ರಮ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದ್ದು, ಯಾರಿಗೂ ಅನುಮಾನ ಬಾರದಂತೆ ಪಡಿತರ ಅಕ್ಕಿಯನ್ನ ಬೇರೆ ಬ್ಯಾಗ್​ಗಳಲ್ಲಿ ಪ್ಯಾಕಿಂಗ್ ಮಾಡಿ ಸಾಗಿಸಲಾಗುತ್ತಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಗದಗ ಗ್ರಾಮೀಣ ಠಾಣೆ ಪಿಎಸ್​​ಐ ಹಾಗೂ ಆಹಾರ ಇಲಾಖೆ ಅಧಿಕಾರಿಗಳು 50 ಕೆಜಿಯ 250 ಬ್ಯಾಗ್ ಅಕ್ಕಿ ಸಹಿತ ಲಾರಿಯನ್ನ ವಶಕ್ಕೆ ಪಡೆದಿದ್ದಾರೆ.

ಲಾರಿಯಲ್ಲಿರುವುದು ಅನ್ನಭಾಗ್ಯ ಅಕ್ಕಿ ಹೌದೋ, ಅಲ್ಲವೋ ಎಂಬ ಬಗ್ಗೆ ಬೆಳಗಾವಿಗೆ ಪರೀಕ್ಷೆ ಕಳಿಸಿ ವರದಿ ಬಂದ ಬಳಿಕ ದೂರು ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಇಲಾಖೆ ಉಪನಿರ್ದೇಶಕ ಜಿ ಬಿ‌ ಮಠದ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details