ಗದಗ: ಜಿಲ್ಲೆಯಲ್ಲಿನ ವಿವಿಧ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ಸಾವಿರಾರು ರೂ ಮೌಲ್ಯದ ನಕಲಿ ಮದ್ಯ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಕಲಿ ಮದ್ಯ ಮಾರಾಟ: ಡಾಬಾಗಳ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು - ಗದಗ ಡಾಬಾ ಮದ್ಯ
ಗದಗ ಜಿಲ್ಲೆಯ ವಿವಿಧ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳು, ಡಾಬಾಗಳ ಮೇಲೆ ದಾಳಿ ಮಾಡಿ ಅಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿರುವ ಜೈ ಮಾತಾ ಡಾಬಾ ಹಾಗೂ ಮುಂಡರಗಿ ಪಟ್ಟಣದಲ್ಲಿರುವ ಹಳ್ಳಿಮನೆ ಡಾಬಾ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು, ಒಟ್ಟು 38.16 ಲೀಟರ್ ನಕಲಿ ಮದ್ಯ ಹಾಗೂ 7.8 ಲೀಟರ್ ಬಿಯರ್ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರತ್ಯೇಕ ಎರಡು ಘಟನೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಿಸಿದ್ದು, ಇಂಪೀರಿಯಲ್ ಬ್ಲ್ಯೂ ಬ್ರಾಂಡ್ ಹೆಸರಿನಲ್ಲಿ ನಕಲಿ ಮದ್ಯ ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು ಎಂಬ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದೇವೆ. ನಕಲಿ ಮದ್ಯ ತಯಾರಾಗುವ ಸ್ಥಳ ಯಾವುದು ಎಂದು ಶೀಘ್ರದಲ್ಲೇ ಪತ್ತೆ ಹಚ್ಚುತ್ತೇವೆ ಎಂದು ಗದಗ ಅಬಕಾರಿ ಡಿಸಿ ಮೋತಿಲಾಲ್ ಹೇಳಿದ್ದಾರೆ.