ಗದಗ: ಜಿಲ್ಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಕೆ.ಹೆಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.
ಗದಗದಲ್ಲಿ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಚಿವ ಸಿ.ಸಿ.ಪಾಟೀಲ್ - ಸಚಿವ ಸಿ.ಸಿ ಪಾಟೀಲ್ ಧ್ವಜಾರೋಹಣ
ಗದಗ ನಗರದ ಕೆ.ಹೆಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಸಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.
ಪೊಲೀಸ್, ಹೋಮ್ ಗಾರ್ಡ್, ಅಗ್ನಿಶಾಮಕ ದಳದ ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು ಸೇರಿದಂತೆ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಪಥಸಂಚಲನ, ನೃತ್ಯ, ಸಂಗೀತ ಕಾರ್ಯಕ್ರಮ ಇದ್ಯಾವುದೂ ಈ ಬಾರಿ ಆಯೋಜಿಸಲಾಗಿಲ್ಲ.
ಕಾರ್ಯಕ್ರಮದಲ್ಲಿ ಗದಗ ಶಾಸಕ ಹೆಚ್.ಕೆ.ಪಾಟೀಲ್, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಡಿಸಿ ಸುಂದರೇಶ್ ಬಾಬು, ಎಸ್ಪಿ ಯತೀಶ್ ಎನ್., ಸಿಇಒ ಡಾ. ಕೆ.ಆನಂದ, ಎಸಿ ಸೇರಿದಂತೆ ಹಲವು ಅಧಿಕಾರಿಗಳು, ರಾಜಕೀಯ ಮುಖಂಡರು ಭಾಗಿಯಾಗಿದ್ದರು. ಇದೇ ವೇಳೆ ಕೊರೊನಾ ವಾರಿಯರ್ಸ್‌ಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.