ಗದಗ: ಅಂತರ್ಜಾತಿ ವಿವಾಹವಾಗಿದ್ದನ್ನು ವಿರೋಧಿಸಿ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಹೇಯ ಕೃತ್ಯ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.
ಅಂತರ್ಜಾತಿ ವಿವಾಹಕ್ಕೆ ವಿರೋಧ: ಗದಗ ಜಿಲ್ಲೆಯಲ್ಲಿ ದಂಪತಿಯ ಬರ್ಬರ ಕೊಲೆ!
ಗದಗ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಂತರ್ಜಾತಿ ವಿವಾಹಕ್ಕೆ ವಿರೋಧ
ಲಕ್ಕಲಕಟ್ಟಿ ಗ್ರಾಮದ ರಮೇಶ್ ಮಾದಾರ (29) ಹಾಗೂ ಗಂಗಮ್ಮ(23) ಎಂಬ ದಂಪತಿ ಕೊಲೆಗೀಡಾದವರು. ಕಟ್ಟಿಗೆ ಮತ್ತು ಕಲ್ಲಿನಿಂದ ಹೊಡೆದು ದಂಪತಿಯನ್ನು ಕೊಲೆ ಮಾಡಲಾಗಿದೆ. ಗಂಗಮ್ಮಳ ಸಹೋದರರಾದ ಶಿವಪ್ಪ, ರವಿ ಹಾಗೂ ರಮೇಶ ರಾಥೋಡ್ ಎಂಬುವರು ಈ ಕೃತ್ಯವೆಸಗಿದ್ದಾರೆಂದು ಆರೋಪಿಸಲಾಗಿದೆ.
ಈಗಾಗಲೇ ಶಿವಪ್ಪ ಮತ್ತು ರವಿ ಎಂಬುವರನ್ನ ಬಂಧಿಸಿರುವ ಪೊಲೀಸರು ಪರಾರಿಯಾಗಿರುವ ರಮೇಶ್ ರಾಥೋಡ ಬಂಧನಕ್ಕೆ ಬಲೆ ಬೀಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.