ಗದಗ:ಜಿಲ್ಲೆಯಾದ್ಯಂತ ಆ. 2ರವರೆಗೆ ಪ್ರತಿಬಂಧಕಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಸುಂದರೇಶಬಾಬು ಎಂ. ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 2ರವರೆಗೆ ಪ್ರತಿಬಂಧಕಾಜ್ಞೆ ಜಾರಿ: ಜಿಲ್ಲಾಧಿಕಾರಿ ಸುಂದರೇಶಬಾಬು ಆದೇಶ - Intercept command
ಗದಗ ಜಿಲ್ಲೆಯಾದ್ಯಂತ ಆ. 2ರವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುಂದರೇಶಬಾಬು ಎಂ. ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಸುಂದರೇಶಬಾಬು ಆದೇಶ
ರಾತ್ರಿ 8 ರಿಂದ ಮುಂಜಾನೆ 5 ರವರೆಗೆ ಸಂಚಾರ ನಿಷೇಧಿಸಲಾಗಿದೆ. ಜೊತೆಗೆ ಭಾನುವಾರ ಲಾಕ್ಡೌನ್ಗೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸಾಂಕ್ರಾಮಿಕ ರೋಗ ಕಾಯ್ದೆ ಹಾಗೂ ವಿಪತ್ತು ನಿರ್ವಹಣೆ ಕಾಯ್ದೆಯಡಿ ಈ ಆದೇಶ ಹೊರಡಿಸಲಾಗಿದೆ. ಆದೇಶ ಉಲ್ಲಂಘಿಸಿದವರ ಮೇಲೆ ಭಾರತೀಯ ದಂಡ ಸಂಹಿತೆ 188ರ ಹಾಗೂ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕ್ರಮ ಜರುಗಿಸಲಾಗುವುದು.