ಗದಗ: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ನಾರಾಯಣಗೌಡ ಬಣದ ಕರೆವೇ ಕಾರ್ಯಕರ್ತರು ಗದಗ್ನಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮಾಡಿದರು. ನಗರದ ಮುಳಗುಂದ ನಾಕಾದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.
ಗದಗ: ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ - karave protest
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಖಂಡಿಸಿ ಗದಗ್ನಲ್ಲಿ ಕರವೇ ವಿನೂತನ ರೀತಿಯ ಪ್ರತಿಭಟನೆ ನಡೆಸಿದೆ. ಎತ್ತಿನ ಗಾಡಿಯ ಮೇಲೆ ಬೈಕ್ ತರುವ ಮೂಲಕ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ತೈಲ ದರ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದರು.
ಗದಗ: ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಕರವೇಯಿಂದ ಪ್ರತಿಭಟನೆ
ಈ ವೇಳೆ ಎತ್ತಿನ ಗಾಡಿಯಲ್ಲಿ ಬೈಕ್ ಇಟ್ಟುಕೊಂಡು ಹಾಗೂ ಬೈಕ್ಗೆ ಹಗ್ಗಕಟ್ಟಿ ಎಳೆದುಕೊಂಡು ಬರುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದರು.
ಈ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೊರೊನಾ ಸಂದರ್ಭದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯಿಂದ ಜನ ಸಾಮಾನ್ಯರಿಗೆ ಹೊರೆಯಾಗಿದೆ. ಕೂಡಲೆ ದರ ಇಳಿಸದೇ ಹೋದರೆ ಮುಂದಿನ ದಿನಮಾನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಪ್ರತಿಭಟನಾಕಾರರು ಪಾದಯಾತ್ರೆ ಮೂಲಕ ಱಲಿ ನಡೆಸಿ ನಂತರ ಜಿಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.