ಕರ್ನಾಟಕ

karnataka

ETV Bharat / state

ಗದಗದಲ್ಲಿ ಕರವೇ ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ - ಎಪಿಎಂಸಿ ಕಾಯ್ದೆ ತಿದ್ದುಪಡಿ ಸುದ್ದಿ

ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಸಹ ನಡೆಯಿತು. ಬಳಿಕ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.

Karave Protesting on the road In Gadag
ಕರವೇ ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ

By

Published : Sep 28, 2020, 10:33 AM IST

ಗದಗ: ಇಂದು ಕರ್ನಾಟಕ ಬಂದ್ ಹಿನ್ನೆಲೆ ನಗರದಲ್ಲಿ ಕರವೇ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ನಗರದ ಟಿಪ್ಪು ಸುಲ್ತಾನ್ ಸರ್ಕಲ್​​ನಲ್ಲಿ ಪ್ರತಿಭಟನೆ ಮಾಡುವ ವೇಳೆ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲು ಕಾರ್ಯಕರ್ತರು ಯತ್ನಿಸಿದರು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಎಸ್​​ಪಿ ಯತೀಶ್ ಎನ್. ಭೇಟಿ ನೀಡಿ ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ, ವಾಹನ ಸವಾರರಿಗೆ ತೊಂದರೆ ಮಾಡದಂತೆ ಸೂಚನೆ ನೀಡಿದರು‌.

ಕರವೇ ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಸಹ ನಡೆಯಿತು. ಬಳಿಕ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದರು. ಬಳಿಕ ಮತ್ತೆ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಬಸ್ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದರು.

ಈ ವೇಳೆ ಓರ್ವ ಕಾರ್ಯಕರ್ತ ಬಸ್​ಗೆ ಅಡ್ಡ ಮಲಗಿ ಪ್ರತಿಭಟನೆ ಮಾಡಲು ಮುಂದಾದಾಗ ಕಾರ್ಯಕರ್ತ ಬಸ್ ಚಕ್ರದಡಿಯಿಂದ ಕ್ಷಣಾರ್ಧದಲ್ಲಿ ಪಾರಾದ ಘಟನೆ ನಡೆಯಿತು. ಬಳಿಕ ಅಲ್ಲಿದ್ದ ಪೊಲೀಸರು ರಸ್ತೆ ತಡೆ ಮಾಡಿದ ಕಾರ್ಯಕರ್ತರನ್ನು ಎಳೆದು ಹಾಕಿದರು.

ABOUT THE AUTHOR

...view details