ಗದಗ:ಕಳೆದೊಂದು ತಿಂಗಳಿನಿಂದ ಬಿರುಸುಗೊಂಡಿದ್ದ ಲೋಕಸಭಾ ಚುನಾವಣೆಯ ಅಬ್ಬರ ತಣ್ಣಗಾಗಿದೆ. ಆದರೆ ಎರಡನೇ ಹಂತದ ಮತದಾದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಮಂಗಳವಾರ ಮಧ್ಯಾಹ್ನ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಗದಗ ನಗರದ ಮತಗಟ್ಟೆಯೊಂದಕ್ಕ ಆಗಮಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಅಂತ ಘೋಷಣೆ ಕೂಗಿದ್ದಾರೆ. ಆಗ ಕೆಲ ಕಾಂಗ್ರೆಸ್ ಕಾರ್ಯಕರ್ತರು ಚೌಕಿದಾರ ಚೋರ್ ಹೈ ಅಂತ ಘೋಷಣೆ ಕೂಗಿದ್ದಾರೆ.
ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವೆ ಜಗಳ ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ತಕ್ಷಣ ಪೊಲೀಸರು ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಆದರೆ ಬಿಜೆಪಿ ಮುಖಂಡ ದಶರಥ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದರಂತೆ. ಹೀಗಾಗಿ ಕಾಂಗ್ರೆಸ್ ಯುವ ಮುಖಂಡ ಸಚಿನ್ ಪಾಟೀಲ್ ಬಿಜೆಪಿ ಮುಖಂಡ ದಶರಥ ಮನೆ ಹೋಗಿ ಚುನಾವಣೆ ಶಾಂತಿಯುತವಾಗಿ ಮುಗಿದಿದೆ. ಯಾವುದೇ ರೀತಿ ಜಗಳ ಬೇಡ ಅಂತ ಮನವಿ ಮಾಡಿದ್ದಾರೆ.