ಕರ್ನಾಟಕ

karnataka

ETV Bharat / state

ಕೆಪಿಟಿಸಿಎಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಕೂಡ ಲೀಕ್? ಗದಗ ಕಾಲೇಜು ಉಪ ಪ್ರಾಚಾರ್ಯ, ಪುತ್ರನ ಬಂಧನ - kptcl exam question paper leak

2022ರ ಆಗಸ್ಟ್ 7 ರಂದು ನಡೆದ ಕೆಪಿಟಿಸಿಎಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಕೂಡ ಲೀಕ್ ಆಗಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಗದಗದಲ್ಲಿ ಮುನ್ಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಹಾಗೂ ಅವರ ಮಗ ಸಮೀತ್​ ಕುಮಾರ್ ಬಂಧಿಸಿರುವ ಪೊಲೀಸರು ತೀವ್ರ ತನಿಖೆ ಮುಂದುವರೆಸಿದ್ದಾರೆ.

kptcl exam question paper leak
ಕೆಪಿಟಿಸಿಎಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಗೆ

By

Published : Aug 22, 2022, 10:39 AM IST

ಗದಗ: ರಾಜ್ಯದಲ್ಲಿ ಇತ್ತೀಚೆಗಷ್ಟೇ ಪಿಎಸ್ಐ ಪರೀಕ್ಷೆಯ ಅಕ್ರಮ ಹಗರಣ ಭಾರಿ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಇದೀಗ ಮತ್ತೊಂದು ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ವರದಿಯಾಗಿದೆ. ಇದೇ ತಿಂಗಳ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲೂ ವಂಚನೆ ನಡೆದಿರುವ ಸಂಶಯ ಬಹುತೇಕ ಸ್ಪಷ್ಟವಾಗುತ್ತಿದೆ.

ಕೆಪಿಟಿಸಿಎಲ್​ನ ಕಿರಿಯ ಸಹಾಯಕ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಾಂಗವಾಗಿ ಎಕ್ಸಾಂ ನಡೆದಿತ್ತು. ಆದರೆ, ಈ ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ಬಹಿರಂಗವಾದ ವಿಷಯದ ಜಾಡು ಹಿಡಿದು ಹೊರಟ ಸೈಬರ್ ಕ್ರೈಂ ಪೊಲೀಸರು ನೇರ ಬಂದು ತಲುಪಿದ್ದು ಗದಗಕ್ಕೆ.

ಕೆಪಿಟಿಸಿಎಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆ

ಇದನ್ನೂ ಓದಿ:ಪಿಎಸ್‌ಐ ನೇಮಕಾತಿ ಅಕ್ರಮ: ತನಿಖೆ ಪ್ರಾಮಾಣಿಕ ಮತ್ತು ಪಾರದರ್ಶಕ- ಸಚಿವ ಆರಗ ಸಮರ್ಥನೆ

ಹೌದು, ಗದಗನಲ್ಲಿಯೇ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆಯೆಂಬ ವಿಷಯದ ಬೆನ್ನು ಬಿದ್ದ ಬೆಳಗಾವಿಯ ಸೈಬರ್ ಕ್ರೈಂ ಪೊಲೀಸರಿಗೆ ಆಘಾತಕಾರಿ ವಿಷಯ ಕಾದಿತ್ತು. ಇಲ್ಲಿನ ಮುನ್ಸಿಪಲ್ ಕಾಲೇಜ್​ನಲ್ಲಿ ನಡೆದ ಪರೀಕ್ಷೆಯಲ್ಲಿ ತಂದೆ-ಮಗ ಪಶ್ನೆ ಪತ್ರಿಕೆ ಸೋರಿಕೆಗೆ ಕೈಜೋಡಿಸಿರುವ ವಿಷಯ ಬಹಿರಂಗವಾಗಿದೆ. ಮುನ್ಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಹಾಗೂ ಅವರ ಮಗ ಸಮೀತ್​ ಕುಮಾರ್ ಬಂಧಿಸಿರುವ ಪೊಲೀಸರು ತೀವ್ರ ತನಿಖೆ ಮುಂದುವರೆಸಿದ್ದಾರೆ.

ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಹೇಗೆ?: ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮಗ ಸಮೀತ್​ ಕುಮಾರ್ ತನ್ನ ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾನೆ. ಅಲ್ಲದೇ, ರಾಜ್ಯದ ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಗೂ ಪ್ರಶ್ನೆ ಪತ್ರಿಕೆ ಕಳಿಸಿರುವ ಶಂಕೆ ವ್ಯಕ್ತವಾಗಿದೆ. ಸಮೀತ್ ಕುಮಾರನ ಮೊಬೈಲ್​ಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಜೊತೆಗೆ ವಿಚಾರಣೆ ವೇಳೆ ಪ್ರಾಚಾರ್ಯರು ಕಣ್ಣೀರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಅಸಿಸ್ಟೆಂಟ್ ಪ್ರೊಫೆಸರ್ ಪ್ರಶ್ನೆಪತ್ರಿಕೆ ಲೀಕ್ ಆಗಿದ್ದೇಗೆ? ಚಾರ್ಜ್​ ಶೀಟ್​ನಲ್ಲಿ ಪಿನ್​ ಟು ಪಿನ್​ ಮಾಹಿತಿ

2022ರ ಆಗಸ್ಟ್ 7 ರಂದು ಕೆಪಿಟಿಸಿಎಲ್ ಪರೀಕ್ಷೆ ನಡೆದಿದ್ದು, ಗದಗ-ಬೆಟಗೇರಿ ಅವಳಿ ನಗರದ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಜಾಡು ಹಿಡಿದು ಬಂದ ಬೆಳಗಾವಿ ಸೈಬರ್ ಕ್ರೈಂ ಪೊಲೀಸ್ ಇನ್ಸ್‌ಪೆಕ್ಟರ್ ವಿರೇಶ್ ದೊಡ್ಡಮನಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೃತ್ಯದ ಹಿಂದೆ ಇನ್ನೂ ಯಾರ್ಯಾರಿದ್ದಾರೆ ಎಂಬ ವಿಷಯ ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.

ABOUT THE AUTHOR

...view details