ಗದಗ:ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸುವಂತೆ ಆಗ್ರಹಿಸಿ ಗದಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಗದಗದಲ್ಲಿ ಸಾರಿಗೆ ನೌಕರರ ಬೃಹತ್ ಪ್ರತಿಭಟನೆ - ಸರ್ಕಾರಿ ನೌಕರರನ್ನಾಗಿ ಘೋಷಿಸುವಂತೆ ಆಗ್ರಹಿಸಿ ಗದಗದಲ್ಲಿ ಬೃಹತ್ ಪ್ರತಿಭಟನೆ
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಗದಗದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಕಚೇರಿ ಎದುರು ಸಾರಿಗೆ ನೌಕರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆ ಯಲ್ಲಿ ಗದಗನ ತೋಂಟದ ಶ್ರೀಸಿದ್ದರಾಮ ಸ್ವಾಮೀಜಿ, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ, ಅಭಿನವ ಶಿವಾನಂದ ಶ್ರೀಗಳು ಸೇರಿದಂತೆ ಸಾರಿಗೆ ಸಿಬ್ಬಂದಿ ಹಾಗೂ ಅನೇಕ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.
ಅನೇಕ ಕಾರ್ಮಿಕ ಇಲಾಖೆ ಸಂಘಟನೆಗಳು ಸಹ ಈ ಹೋರಾಟಕ್ಕೆ ಸಾಥ್ ನೀಡಿವೆ. ರಾಜ್ಯದಲ್ಲಿ ನಾಲ್ಕು ವಿಭಾಗದಲ್ಲಿ 1ಲಕ್ಷದ 30 ಸಾವಿರಕ್ಕೂ ಅಧಿಕ ಸಿಬ್ಬಂದಿ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಅವರ ಸ್ಥಿತಿಗತಿಗಳನ್ನು ಅವಲೋಕಿಸಿ ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಅಂತ ಸರ್ಕಾರಕ್ಕೆ ಒತ್ತಾಯಿಸಿದರು. ಸರ್ಕಾರಿ ಬಸ್, ಸರ್ಕಾರಿ ಸಾರಿಗೆ, ಸರ್ಕಾರದ ರಿಯಾಯ್ತಿ, ಸಾರಿಗೆ ಎಲ್ಲ ರಂಗವೂ ಸರ್ಕಾರದ್ದಾಗಿದ್ದು, ಆದ್ರೆ ಸಿಬ್ಬಂದಿ ಕಾರ್ಮಿಕರು ಮಾತ್ರ ಸಂಸ್ಥೆಗೆ ಒಳಪಡಸದೇ ಇರುವುದು ಯಾವ ನ್ಯಾಯ? ಅಂತ ಹೋರಾಟಗಾರರು ಸರ್ಕಾರಕ್ಕೆ ಪ್ರಶ್ನೆ ಮಾಡಿದರು. ಹಗಲು-ರಾತ್ರಿ ಎನ್ನದೇ ಪ್ರಾಣವನ್ನು ಪಣಕ್ಕಿಟ್ಟು ಸೇವೆ ನೀಡುತ್ತೇವೆ. ಸಾರಿಗೆ ಸಿಬ್ಬಂದಿ ಮೇಲೆ ಸರ್ಕಾರ ಮಲತಾಯಿ ಧೋರಣೆ ಮಾಡಬಾರದು ಅಂತ ತಮ್ಮ ಅಳಲು ತೋಡಿಕೊಂಡ ಪ್ರತಿಭಟನಕಾರರು ಗದಗ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.