ಗದಗ:ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಯುವತಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.
ಬಾವಿಯಲ್ಲಿ ಪತ್ತೆಯಾದ ಯುವತಿ ಶವ: ಅತ್ಯಾಚಾರ, ಕೊಲೆ ಶಂಕೆ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವ್ಯಾಪ್ತಿಯ ಜಮೀನಿನ ಬಾವಿಯೊಂದರಲ್ಲಿ 19 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
19 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಯುವತಿ ಕಾಣೆಯಾಗಿದ್ದಾಳೆ ಅಂತಾ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಆದರೆ, ಏಕಾಏಕಿ ಇಂದು ಗ್ರಾಮದ ಜಮೀನೊಂದರ ಬಾವಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಆಕೆಯನ್ನ ಬಸವರಾಜ ರೋಣದ ಎಂಬಾತನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆಂದು ಯುವತಿಯ ಸಹೋದರ ದೂರು ನೀಡಿದ್ದಾರೆ.
ಇನ್ನೂ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ. ಮುಂಡರಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.