ಗದಗ: ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹರಡಿದೆ. ಇದರಿಂದಾಗಿ ಮುದ್ರಣ ಕಾಶಿ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಉತ್ಸವಕ್ಕೂ ಈಗ ಬ್ರೆಕ್ ಬಿದ್ದಿದೆ. ಕೊರೊನಾ ವೈರಸ್ ತಡೆಗೆ ರಾಜ್ಯ ಆರೋಗ್ಯ ಇಲಾಖೆ ಮೂಲಕ ಹಲವು ಕಟ್ಟುನಿಟ್ಟಿನ ಮಾರ್ಗದರ್ಶಿ ಅಂಶಗಳನ್ನ ಕಡ್ಡಾಯವಾಗಿ ಪಾಲಿಸಲು ನಿರ್ದೇಶಿಸಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಕೊರೊನಾ ಎಫೆಕ್ಟ್‌ನಿಂದಾಗಿ ಲಕ್ಕುಂಡಿ ಉತ್ಸವ ಮುಂದೂಡಿಕೆ.. - ಮುದ್ರಣ ಕಾಶಿ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಉತ್ಸವ
ಕೊರೊನಾ ತಡೆಗೆ ರಾಜ್ಯ ಆರೋಗ್ಯ ಇಲಾಖೆ ಹಲವು ಕಟ್ಟುನಿಟ್ಟಿನ ಮಾರ್ಗದರ್ಶಿ ಅಂಶಗಳನ್ನ ಕಡ್ಡಾಯವಾಗಿ ಪಾಲಿಸಲು ನಿರ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಲಕ್ಕುಂಡಿ ಉತ್ಸವಕ್ಕೆ ತಡೆ ನೀಡಿದೆ.
ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ
ಮಾರ್ಚ್ 21 ಹಾಗೂ 22 ರಂದು ನಡೆಯಬೇಕಿದ್ದ ಅದ್ದೂರಿ ಲಕ್ಕುಂಡಿ ಉತ್ಸವವನ್ನು ಮುಂದೂಡಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸ್ಪಷ್ಟನೆ ನೀಡಿದ್ದಾರೆ.