ಗದಗ:ಸರ್ಕಾರಿ ಶಾಲಾ ಆವರಣದಲ್ಲಿ ಏಕಾಏಕಿ ಭೂ ಕುಸಿತವಾಗಿದ್ದು, ಭಾರಿ ಅನಾಹುತ ತಪ್ಪಿದೆ. ನಗರದ ವೀರನಾರಾಯಣ ದೇವಸ್ಥಾನದ ಬಳಿಯ ಸರ್ಕಾರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂಬರ್-2 ರ ಆವರಣದಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ರಜೆ ಇರುವುದರಿಂದ ಭಾರಿ ಅನಾಹುತ ತಪ್ಪಿದೆ.
ಸರ್ಕಾರಿ ಶಾಲಾ ಆವರಣದಲ್ಲಿ ಭೂ ಕುಸಿತ; ತಪ್ಪಿದ ಭಾರಿ ಅನಾಹುತ - landslide in Naragunda
ನಗರದ ವೀರನಾರಾಯಣ ದೇವಸ್ಥಾನದ ಬಳಿಯ ಸರ್ಕಾರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂಬರ್ -2 ರ ಆವರಣದಲ್ಲಿ ಭೂ ಕುಸಿತವಾಗಿದೆ. ಶಾಲೆ ರಜೆ ಇರುವುದರಿಂದ ಭಾರಿ ಅನಾಹುತ ತಪ್ಪಿದೆ. ಘಟನೆಯಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.
ಶಿಕ್ಷಕರು ಹಾಗೂ ಸ್ಥಳೀಯರು ಶಾಲೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಭೂ ಕುಸಿತವಾದ ಸ್ಥಳಕ್ಕೆ ಮಣ್ಣು ಹಾಕುವಂತೆ ಗದಗ-ಬೆಟಗೇರಿ ನಗರ ಸಭೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಭೂ ಕುಸಿತವಾದ ಪ್ರದೇಶಕ್ಕೆ ಈ ಕೂಡಲೇ ಮಣ್ಣು ಹಾಕುವಂತೆ ಶಿಕ್ಷಕರು ಹಾಗೂ ಸ್ಥಳೀಯರು ಒತ್ತಾಯ ಮಾಡಿದ್ದಾರೆ.
ಇನ್ನು ಜಿಲ್ಲೆಯ ನರಗುಂದ ಪಟ್ಟಣದಲ್ಲಿಯೂ ಸಹ ಪದೇ ಪದೇ ಭೂ ಕುಸಿತವಾಗುತ್ತಿದ್ದು, ಜನರು ನಿತ್ಯ ಭಯದಲ್ಲಿ ಜೀವನ ನಡೆಸುವಂಥ ಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಇದೀಗ ನಗರದಲ್ಲಿ ಭೂ ಕುಸಿತವಾಗಿರುವುದರಿಂದ ಸ್ಥಳೀಯರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ. ಹಾಗಾಗಿ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಮುಖಂಡರು ಒತ್ತಾಯ ಮಾಡಿದ್ದಾರೆ.