ಕರ್ನಾಟಕ

karnataka

ETV Bharat / state

ಗದಗದಲ್ಲಿ ಬೈಕ್​ಗೆ ಲಾರಿ ಡಿಕ್ಕಿ: ಇಬ್ಬರ ದುರ್ಮರಣ

ಬೈಕ್​ಗೆ ಹಿಂಬದಿಯಿಂದ‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ  ನಡೆದಿದೆ.

By

Published : Oct 28, 2019, 12:02 PM IST

ಬೈಕ್​ಗೆ ಲಾರಿ ಡಿಕ್ಕಿ: ಇಬ್ಬರ ದುರ್ಮರಣ

ಗದಗ: ಬೈಕ್​ಗೆ ಹಿಂಬದಿಯಿಂದ‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.

ಬೈಕ್​ಗೆ ಲಾರಿ ಡಿಕ್ಕಿ: ಇಬ್ಬರ ದುರ್ಮರಣ

ಬೈಕ್ ಸವಾರ ನಾಗರಾಜ್ (32) ಮೃತ. ನಾಗರಾಜ್ ಬಳ್ಳಾರಿ ಜಿಲ್ಲೆ ಹಡಗಲಿ ತಾಲೂಕಿನ ನವಲೆ ಗ್ರಾಮದವನೆಂದು ತಿಳಿದುಬಂದಿದ್ದು, ನೀರಾವರಿ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಕೆಲಸಕ್ಕೆ ತೆರಳುವಾಗ ಈ ಘಟನೆ ನಡೆದಿದೆ. ಅಪಘಾತ ನಂತರ ಲಾರಿ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.

ಮುಂಡರಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ABOUT THE AUTHOR

...view details