ಗದಗ:ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯಕ್ಕೆ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದೆ. ಗೋವಾದ ಒತ್ತಡದ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯು ಯೋಜನೆಯ ಜಾರಿಗೆ ನೀಡಿದ್ದ ಆದೇಶವನ್ನು ಇದ್ದಕ್ಕಿದ್ದಂತೆ ಅಮಾನತು ಮಾಡುವುದಾಗಿ ಪ್ರಕಟಿಸಿದೆ. ಇದರಿಂದ ಯೋಜನೆಯ ಅನುಷ್ಠಾನಕ್ಕೆ ಭಾರೀ ಹಿನ್ನೆಡೆಯಾಗಿದೆ. ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಗದಗನಲ್ಲಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹದಾಯಿ ವಿವಾದ.. ಕೇಂದ್ರ ಸರ್ಕಾರದ ವಿರುದ್ಧ ಗದಗನಲ್ಲಿ ಹೋರಾಟಗಾರರ ಆಕ್ರೋಶ.. - Mahadi water sharing controversy
ಮಹಾದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯಕ್ಕೆ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದೆ. ಗೋವಾದ ಒತ್ತಡದ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯು ಯೋಜನೆಯ ಜಾರಿಗೆ ನೀಡಿದ್ದ ಆದೇಶವನ್ನು ಇದ್ದಕ್ಕಿದ್ದಂತೆ ಅಮಾನತು ಮಾಡುವುದಾಗಿ ಪ್ರಕಟಿಸಿದೆ. ಇದರಿಂದ ಯೋಜನೆಯ ಅನುಷ್ಠಾನಕ್ಕೆ ಭಾರೀ ಹಿನ್ನೆಡೆಯಾಗಿದೆ. ಕೇಂದ್ರ ಕ್ರಮದ ವಿರುದ್ಧ ಗದಗನಲ್ಲಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿಯನ್ನೇ ಗೆಲ್ಲಿಸಿದ್ದರೂ ಕೂಡಾ, ಇವರ ಕೈಯಲ್ಲಿ ಏನೂ ಮಾಡೋಕೆ ಆಗ್ತಿಲ್ಲ. ಕೇವಲ ರಾಜಕೀಯಕ್ಕಾಗಿ ಮಾತ್ರ ಜನರನ್ನು ಬಳಸಿಕೊಳ್ಳುತ್ತಿದ್ದಾರೆ. ಯೋಜನೆಯ ಅನುಷ್ಠಾನವಾಗದಿದ್ದಲ್ಲಿ ಮುಂದೊಂದು ದಿನ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ ಮಾಡಲಾಗುವುದು. ಈ ಕುರಿತು ಮುಖ್ಯಮಂತ್ರಿಗಳು ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಅಲ್ಲದೇ ಪ್ರಧಾನಿ ಮೋದಿಯವರು ಚುನಾವಣೆಯ ಸಂದರ್ಭದಲ್ಲಿ ಗದಗ ಜಿಲ್ಲೆಗೆ ಆಗಮಿಸಿ ಮಹದಾಯಿ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಗೋವಾದ ಕುತಂತ್ರಕ್ಕೆ ಮಣಿದಿದ್ದಾರೆ. ಪ್ರಣಾಳಿಕೆಯಲ್ಲಿ ರೈತರ ಪರವಾದ ಬಜೆಟ್ ಮಂಡಿಸುವುದಾಗಿ ಭರವಸೆ ನೀಡುವ ಮೋದಿ ಹಾಗೂ ಯಡಿಯೂರಪ್ಪ ಇಂದು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.