ಕರ್ನಾಟಕ

karnataka

ETV Bharat / state

ಬೆಟಗೇರಿ ಆಸ್ಪತ್ರೆ ಸೀಲ್​ ಡೌನ್​ ಮಾಡಲು ಜಿಲ್ಲಾಡಳಿತ ಹಿಂದೇಟು ಆರೋಪ - ಜಿಲ್ಲಾಡಳಿತ ಹಿಂದೇಟು ಆರೋಪ

ಎರಡು ದಿನಗಳ ಹಿಂದೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಬೆಟಗೇರಿಯ ಇಎಸ್​​ಐ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ಹಿಂದೇಟು ಹಾಕ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಅಲ್ಲಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

man died of corona vires Gadag District hesitated hospital seal down
ಕೊರೊನಾದಿಂದ ಸಾವನ್ನಪ್ಪಿದ್ದ ವ್ಯಕ್ತಿ, ಬೆಟಗೇರಿ ಆಸ್ಪತ್ರೆ ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ಹಿಂದೇಟು ಆರೋಪ

By

Published : Jun 5, 2020, 10:13 PM IST

ಗದಗ: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಆಸ್ಪತ್ರೆ ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ಹಿಂದೇಟು ಆರೋಪ

ಡಯಾಬಿಟಿಸ್, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಲಕ್ಕುಂಡಿ ಗ್ರಾಮದ 44 ವರ್ಷದ ವ್ಯಕ್ತಿ ಬೆಟಗೇರಿ ಇಎಸ್​​ಐ ಆಸ್ಪತ್ರೆಯಲ್ಲಿ ಐದು ದಿನಗಳ ಕಾಲ ಚಿಕಿತ್ಸೆ ಪಡೆದಿದ್ದ. ಬಳಿಕ ಆತನ ಆರೋಗ್ಯದಲ್ಲಿ ಚೇತರಿಕೆಯಾಗದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್​​ಗೆ ದಾಖಲಿಸಲಾಗಿತ್ತು. ಅಲ್ಲಿ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೊದಲು ಬೆಟಗೇರಿಯ ಇಎಸ್​​ಐ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಸೋಂಕಿತನಿದ್ದ ಕೊಠಡಿ ಮಾತ್ರ ಕಾಟಾಚಾರಕ್ಕೆ ಸೀಲ್ ಮಾಡಿ ಆರೋಗ್ಯ ಇಲಾಖೆ ಕೈ ತೊಳೆದುಕೊಂಡಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ‌.

ಇನ್ನು ಆಸ್ಪತ್ರೆಯ ನರ್ಸ್, ಡಾಕ್ಟರ್ ಮತ್ತು 22 ಜನರನ್ನು ಸಹ ಹೊಂ ಕ್ವಾರಂಟೈನ್​ ಮಾಡಲಾಗಿದೆ. ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆದ ಪಕ್ಕದ ರೂಂನಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡ್ತಿದ್ದಾರೆ. ಈ ನಡೆಗೆ ಗದಗ-ಬೆಟಗೇರಿ ಅವಳಿ ನಗರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details